ಬೆಂಗಳೂರು: ಮಹಾವೀರ ಜಯಂತಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಹಿನ್ನೆಲೆ ನಾಳೆ ಬೆಂಗಳೂರು ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ಮಾಡದಂತೆ ಬಿಬಿಎಂಪಿ ಆದೇಶ ಹೊರಡಿಸಿದೆ.
ಈ ಬಗ್ಗೆ ಬಿಬಿಎಂಪಿಯ ಪಶು ಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಟ ಮಳಿಗೆಗಳಲ್ಲಿ ಮಾಂಸ ಮಾರಾಟ ವನ್ನು ಸಂಪೂರ್ಣವಾಗಿ ನಿಷೇಧಿಸ ಲಾಗಿದೆ ಎಂದು ತಿಳಿಸಿದ್ದಾರೆ.
ನಿಯಮ ಉಲ್ಲಂಘನೆ ಮಾಡಿ ಮಾಂಸದ ಅಂಗಡಿಗಳನ್ನು ತೆಗೆದರೆ, ಪಾಲಿಕೆಯಿಂದ ಮಾಂಸದ ಅಂಗಡಿಯ ಪರವಾನಗಿ ರದ್ದುಪಡಿಸಿ, ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ಪಾಲಿಕೆ ತಿಳಿಸಿದೆ.
Kshetra Samachara
13/04/2022 06:59 pm