ವರದಿ -ಗೀತಾಂಜಲಿ
ಬೆಂಗಳೂರು:ಬಿಬಿಎಂಪಿ ಚುನಾವಣೆ ನಡೆಸುವ ಪ್ರಕರಣದ ವಿಚಾರಣೆಯನ್ನ ಸುಪ್ರೀಂ ಕೋರ್ಟ್ ಜುಲೈ 26ಕ್ಕೆ ಮುಂದೂಡಿದೆ. ಪ್ರಕರಣದ ವಿಚಾರಣೆ ನಡೆಯುತ್ತಿರುವ ಚೀಫ್ ಜಸ್ಟೀಸ್ ಎನ್ ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠವು ವಿಚಾರಣೆಯನ್ನು ಮುಂದಿನ ಮಂಗಳವಾರಕ್ಕೆ ಮುಂದೂಡಿದೆ.
ಬಿಬಿಎಂಪಿ ಚುನಾವಣೆ ನಡೆಸುವಂತೆ ಕರ್ನಾಟಕ ಸರ್ಕಾರಕ್ಕೆ ನೀಡಿದ್ದ ಎಂಟು ವಾರಗಳ ಗಡುವು ಅಂತ್ಯಗೊಂಡ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಇಂದು ವಿಚಾರಣೆ ಕೈಗೆತ್ತಿಕೊಂಡಿತ್ತು. ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ಬಿಬಿಎಂಪಿ ಪ್ರಕರಣದ ವಿಚಾರಣೆ ನಡೆಯಿತು.
ಈ ಮಧ್ಯೆ, ಚುನಾವಣೆ ನಡೆಸಲು ಮತ್ತಷ್ಟು ಕಾಲಾವಕಾಶ ಕೇಳಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ವಾರ್ಡ್ಗಳ ಮರುವಿಂಗಡಣೆಯಾಗಿದೆಯಾದರೂ ಈವರೆಗೆ ರಾಜ್ಯ ಸರ್ಕಾರವು ಮೀಸಲಾತಿ ಪ್ರಕಟಿಸಲು ಆಗಿಲ್ಲ. ಮೀಸಲಾತಿ ಪ್ರಕಟಿಸಲು ಕನಿಷ್ಠ 4 ವಾರ ಸಮಯ ಕೇಳುವ . ಆದರೆ, ಇದಕ್ಕೆ ವಿರೋಧ ವ್ಯಕ್ತಪಡಿಸಲು ಅರ್ಜಿದಾರರಾದ ಶಿವರಾಜ್ ಮತ್ತು ವಾಜಿದ್ ಸಿದ್ಧತೆ ಮಾಡಿಕೊಂಡಿದ್ದಾರೆ.
Kshetra Samachara
22/07/2022 07:37 pm