ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಫ್ರೀಡಂ ಪಾರ್ಕ್ ಹೊರತು ಬೇರೆ ಕಡೆ ಪ್ರತಿಭಟನೆ ಮಾಡೋ ಹಾಗಿಲ್ಲ; ಹೈಕೋರ್ಟ್ ಆದೇಶ

ಬೆಂಗಳೂರು: ಫ್ರೀಡಂ ಪಾರ್ಕ್‌ ಹೊರತುಪಡಿಸಿ ನಗರದ ಯಾವುದೇ ಭಾಗದಲ್ಲೂ ರಾಜಕೀಯ ಅಥವಾ ರಾಜಕಿಯೇತರ ಸಂಘಟನೆಗಳು ಮೆರವಣಿಗೆ, ಪ್ರತಿಭಟನೆ, ಬಹಿರಂಗ ಸಭೆ ನಡೆಸಲು ಅನುಮತಿ ನೀಡದಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಈ ಕುರಿತಂತೆ ಹೈಕೋರ್ಟ್ ದಾಖಲಿಸಿಕೊಂಡಿದ್ದ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ನಿನ್ನೆ ನಡೆದ ವಿಚಾರಣೆಯಲ್ಲಿ ಈ ಆದೇಶವನ್ನು ಸರ್ಕಾರಕ್ಕೆ ನೀಡಿದೆ.

2021ರಲ್ಲಿ ಅನುಷ್ಠಾನಗೊಳಿಸಿರುವ ಪ್ರತಿಭಟನೆಗಳು, ಪ್ರದರ್ಶನಗಳು ಮತ್ತು ಪ್ರತಿಭಟನಾ ಮೆರವಣಿಗೆಗಳ ಪರವಾನಗಿ ಮತ್ತು ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

Edited By : Vijay Kumar
Kshetra Samachara

Kshetra Samachara

02/08/2022 01:10 pm

Cinque Terre

900

Cinque Terre

0

ಸಂಬಂಧಿತ ಸುದ್ದಿ