ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಾರ್ಡ್ ಪುನರ್ ವಿಂಗಡಣೆ ಮೀಸಲಾತಿ ಅಗಸ್ಟ್ 16ರವರೆಗೆ ತಡೆ ಹಿಡಿಯುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ಮಾಡಿದೆ.
ರಾಜ್ಯ ಸರ್ಕಾರದ ಮೀಸಲಾತಿ ಅಧಿಸೂಚನೆ ಪ್ರಶ್ನಿಸಿ ಹೈಕೋರ್ಟ್ಗೆ ದಾಖಲಾಗಿದ್ದ ಹಲವು ರಿಟ್ ಅರ್ಜಿಗಳನ್ನು ನ್ಯಾಯಾಲಯವು ವಿಚಾರಣೆಗೆ ಕೈಗೆತ್ತಿಕೊಂಡಿದೆ. ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿ, ಚುನಾವಣಾ ಆಯೋಗವನ್ನೂ ಪ್ರತಿವಾದಿಯಾಗಿಸಲು ಸೂಚನೆ ನೀಡಿತು.
ಕರ್ನಾಟಕ ಸರ್ಕಾರವು ಅವೈಜ್ಞಾನಿಕವಾಗಿ ವಾರ್ಡ್ ಪುನರ್ವಿಂಗಡಣೆಗೆ ಆದೇಶ ಮಾಡಿದೆ. ಈ ಅಧಿಸೂಚನೆಯನ್ನು ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದರು. ಆಗಸ್ಟ್ 16ರವರೆಗೆ ಮೀಸಲಾತಿ ಪಟ್ಟಿ ಅಂತಿಮಗೊಳಿಸಬೇಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮೌಖಿಕ ಸೂಚನೆ ನೀಡಿತು.
Kshetra Samachara
10/08/2022 04:01 pm