ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಬಿಎಂಪಿ 243 ವಾಡ್೯ಗಳಿಗೆ ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

ಬೆಂಗಳೂರು‌: ನ್ಯಾಯಾಲಯದ ಆದೇಶದ ಹಿನ್ನಲೆಯಲ್ಲಿ ಬಿಬಿಎಂಪಿ ಚುನಾವಣೆಗೆ ತಯಾರಿ ನಡೆಸಿರುವ ರಾಜ್ಯ ಸರ್ಕಾರ ಬಿಬಿಎಂಪಿಯ 243 ವಾರ್ಡ್‌ಗಳಿಗೆ ಮೀಸಲಾತಿಯನ್ನು ನಿಗದಿ ಪಡಿಸಿ ಅಂತಿಮ‌‌ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಈ ಹಿಂದೆ ಬಿಬಿಎಂಪಿಯ 198 ವಾಡ್೯ಗಳನ್ನು 243 ಕ್ಕೆ ಹೆಚ್ಚಿಸಿ‌ ವಾಡ್೯ ಪುನರ್ ವಿಂಗಡಣೆ ಮಾಡಿ ಸರ್ಕಾರ ಗೆಜೆಟ್ ನೊಟಿಫಿಕೇಶನ್ ಹೊರಡಿಸಿತ್ತು. ಅದಕ್ಕೆ ಸರಿಸುಮಾರು 3 ಸಾವಿರ ಸಾರ್ವಜನಿಕ ಆಕ್ಷೇಪಣೆಗಳು ವ್ಯಕ್ತವಾಗಿದ್ದವು. ಆನಂತರ ಮೀಸಲಾತಿ ಪಟ್ಟಿಯನ್ನು ಬಿಡುಗಡೆ ಮಾಡಿದ ಸರ್ಕಾರ ಸಾರ್ವಜನಿಕರ ಆಕ್ಷೇಪಣೆಯನ್ನು ಆಹ್ವಾನಿಸಿತ್ತು. ಇದೀಗ ಆಕ್ಷೇಪಣೆಯ ಅವಧಿ ಮುಗಿದಿದ್ದು ಸರ್ಕಾರ ತನ್ನ ಹಿಂದಿನ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಮಾಡದೆ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ.

Edited By : Nagaraj Tulugeri
PublicNext

PublicNext

17/08/2022 12:12 am

Cinque Terre

19.93 K

Cinque Terre

0

ಸಂಬಂಧಿತ ಸುದ್ದಿ