ಬೆಂಗಳೂರು: ಬಿಬಿಎಂಪಿ ವಾರ್ಡ್‌ಗಳ ವಿಂಗಡಣೆ ಅಧಿಸೂಚನೆಯನ್ನು ಪ್ರಶ್ನೆ ಮಾಡಿ ಅರ್ಜಿದಾರರು ಸುಪ್ರೀಂ ಕೋರ್ಟ್ ಮೊರೆ ಹೋಗಬಹುದಾಗಿದೆ ಎಂದು ಹೈಕೋರ್ಟ್ ಆದೇಶ ನೀಡಿದೆ.
ಸುರೇಶ್ ಮಹಾಜನ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶ ಉಲ್ಲೇಖಿಸಿ ನ್ಯಾಯಮೂರ್ತಿ ಹೇಮಂತ್ ಚಂದನಗೌಡ ಅವರು ಈ ಆದೇಶ ಹೊರಡಿಸಿದ್ದಾರೆ. ‘ಮರು ವಿಂಗಡಣೆ ಆಗಿಲ್ಲ ಎಂಬ ಕಾರಣಕ್ಕೆ ಈಗಾಗಲೇ ವಿಳಂಬವಾಗಿರುವ ಚುನಾವಣೆ ಮುಂದೂಡುವ ಅಗತ್ಯವಿಲ್ಲ’ ಎಂದು ಮಧ್ಯಪ್ರದೇಶದ ಚುನಾವಣೆ ಸಂಬಂಧದ ಸುರೇಶ್ ಮಹಾಜನ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತಿಳಿಸಿತ್ತು. ‘ಬಿಬಿಎಂಪಿ ಕಾಯ್ದೆ 2020ರ ಸೆಕ್ಷನ್ 13ರ ಪ್ರಕಾರವೂ ಚುನಾಯಿತ ಸದಸ್ಯರ ಅವಧಿ ಮುಗಿಯುವ ಮೊದಲೇ ಚುನಾವಣೆ ನಡೆಯಬೇಕು. 2020ರ ಸೆಪ್ಟೆಂಬರ್ 10ರಂದೇ ಚುನಾಯಿತ ಸದಸ್ಯರ ಅವಧಿ ಮುಗಿದಿದೆ’ ಎಂದು ನ್ಯಾಯಪೀಠ ಹೇಳಿತು. ಕ್ಷೇತ್ರ ಮರು ವಿಂಗಡಣೆಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಆ.29ಕ್ಕೆ ಮುಂದೂಡಿತು.
PublicNext
21/08/2022 10:17 pm