ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸುಪ್ರೀಂ ಕೋರ್ಟ್ ನಿರ್ದೇಶನದಿಂದ ಎಚ್ಚೆತ್ತ ಸರ್ಕಾರ: ಬಿಡಿಎ ಆಯುಕ್ತ ವರ್ಗಾವಣೆ

ಬೆಂಗಳೂರು: ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಎಚ್ಚೆತ್ತುಕೊಂಡ ರಾಜ್ಯ ಸರಕಾರ ಕೂಡಲೇ ಬಿಡಿಎ ಆಯುಕ್ತರಾಗಿದ್ದ ರಾಜೇಶ್‌ ಗೌಡ ಅವರನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ನೀಡಿದೆ. ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರನಾಯ್ಕ ಅವರಿಗೆ ಬಿಡಿಎ ಆಯುಕ್ತರಾಗಿ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಇದುವರೆಗೆ ರಾಜೇಶ್ ಗೌಡ ಅವರಿಗೆ ಸ್ಥಳ ನಿಯುಕ್ತಿಗೊಳಿಸಿಲ್ಲ.

ಇದೇ ವೇಳೆ, ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘಿಸಿ ಹಂಚಿಕೆ ಮಾಡಲಾಗಿರುವ ಬದಲಿ ನಿವೇಶನಗಳನ್ನು ಹಿಂಪಡೆದು, ನಿಯಮದಂತೆ ಮತ್ತೆ ನಿವೇಶನ ಹಂಚಿಕೆ ಮಾಡಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿರ್ಧರಿಸಿದೆ. ಭೂಸ್ವಾಧೀನ ಮಾಡಿಕೊಳ್ಳದ ಪ್ರದೇಶದಲ್ಲಿ ನಿವೇಶನ ಹಂಚಿಕೆ ಮಾಡಿ ನಂತರ ಅದಕ್ಕೆ ಬದಲಾಗಿ ಬೇರೆಡೆ ನಿವೇಶನ ನೀಡುವ ವೇಳೆ ಹೊಸದಾಗಿ ಅಭಿವೃದ್ಧಿಯಾಗಿರುವ ಲೇಔಟ್‌ಗಳಲ್ಲಿ ನಿವೇಶನ ನೀಡುವಂತೆ ಸುಪ್ರೀಂಕೋರ್ಟ್‌ 2021ರ ಅಕ್ಟೋಬರ್‌ನಲ್ಲಿ ಆದೇಶಿಸಿದೆ. ಆದರೆ, ಈ ಆದೇಶ ಉಲ್ಲಂ ಸಿರುವ ಬಿಡಿಎ ಅಧಿಕಾರಿಗಳು 2021ರ ಡಿಸೆಂಬರ್‌ನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿ ನಾಲ್ವರಿಗೆ ಬದಲಿ ನಿವೇಶನ ಹಂಚಿಕೆ ಮಾಡಿದೆ. ಅಧಿಕಾರಿಗಳ ಈ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್‌ ಗುರುವಾರ, ಬಿಡಿಎ ಆಯುಕ್ತರ ವರ್ಗಾವಣೆಗೆ ಮೌಖಿಕವಾಗಿ ಸೂಚಿಸಿದೆ.

Edited By : Nagaraj Tulugeri
PublicNext

PublicNext

27/08/2022 09:57 am

Cinque Terre

21.68 K

Cinque Terre

4

ಸಂಬಂಧಿತ ಸುದ್ದಿ