ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಗೊಳಿಸಿ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ.
ಕೋರ್ಟ್ ಎಸಿಬಿ ರದ್ದುಗೊಳಿಸಿ ಆದೇಶ ಹೊರಡಿಸಿದ ತಿಂಗಳ ಬಳಿಕ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ರಚನೆಯಾಗಿತ್ತು. ಆದರೆ ಇತ್ತೀಚೆಗೆ ಎಸಿಬಿಯಲ್ಲೇ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು.
PublicNext
09/09/2022 09:43 pm