ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಜಿಎಸ್‌ಟಿ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಕೇಂದ್ರ ಸರ್ಕಾರ ವಿಧಿಸಿರುವ ಸರಕು ಸೇವಾ ತೆರಿಗೆ (ಜಿಎಸ್‌ಟಿ) ಏರಿಕೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ದಿನನಿತ್ಯದ ವಸ್ತುಗಳ ಮೇಲೆ ಜಿಎಸ್‌ಟಿ ವಿಧಿಸಿರುವುದನ್ನ ಖಂಡಿಸಿ ಕಾಂಗ್ರೆಸ್‌ನಿಂದ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕೋರಮಂಗಲದ ಜಿಎಸ್‌ಟಿ ಆಫೀಸ್ ಬಳಿ ಸೇರಿದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು.

ಕಾಂಗ್ರೆಸ್ ಕೆಪಿಸಿಸಿ ವರ್ಕಿಂಗ್ ಪ್ರೆಸಿಡೆಂಟ್ ಆಗಿರುವ ರಾಮಲಿಂಗಾರೆಡ್ಡಿ, ಶಾಂತಿನಗರ ಶಾಸಕ ಎನ್.ಎ ಹ್ಯಾರಿಸ್, ಜಯನಗರ ಶಾಸಕಿ ಸೌಮ್ಯ ರೆಡ್ಡಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ರಾಮಲಿಂಗಾರೆಡ್ಡಿ ಅವರು, ಬಿಜೆಪಿ ಸರ್ಕಾರ ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬಿಸಿ ನೀಡುತ್ತಿದೆ. ಇದರಿಂದ ಜನಸಾಮಾನ್ಯರು ಪರದಾಡುವಂತಾಗಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದರು.

ನವೀನ್ ಪಬ್ಲಿಕ್ ನೆಕ್ಸ್ಟ್ ಬೆಂಗಳೂರು.

Edited By : Somashekar
PublicNext

PublicNext

20/07/2022 04:37 pm

Cinque Terre

29.18 K

Cinque Terre

0

ಸಂಬಂಧಿತ ಸುದ್ದಿ