ಅನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಉಪನೋಂದಣಿ ಅಧಿಕಾರಿಗಳ ಕಚೇರಿ ಮುಂಭಾಗ ಭಾರಿ ಗಾತ್ರದ ವಾಹನಗಳು ಹಾಗೂ ದ್ವಿಚಕ್ರ ವಾಹನಗಳು ನಿಲುಗಡೆ ಯಿಂದಾಗಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಪುರಸಭೆ ಸದಸ್ಯ ಪ್ರಗತಿ ಶ್ರೀರಾಮ್ ಶಾಸಕ ಶಿವಣ್ಣನವರಿಗೆ ಖುದ್ದಾಗಿ ದೂರನ್ನ ಸಲ್ಲಿಕೆ ಮಾಡಿದ್ದಾರೆ.
ಇನ್ನು ಆನೇಕಲ್ ಟೌನ್ ಗೆ ರಸ್ತೆ ಮಾರ್ಗವಾಗಿ ಚಲಿಸುವ ವಾಹನ ಸವಾರರಿಗೆ ಪ್ರತಿನಿತ್ಯ ಟ್ರಾಫಿಕ್ ಕಿರಿಕಿರಿ ಹಾಗೂ ರಸ್ತೆ ಬದಿಯಲ್ಲಿ ವಾಹನ ನಿಲುಗಡೆ ಮಾಡಿ ಸಾರ್ವಜನಿಕ ತೊಂದರೆಯನ್ನು ನೀಡುತ್ತಿದ್ದಾರೆ. ಹೀಗಾಗಿ ಉಪನೊಂದಣಿ ಅಧಿಕಾರಿಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಳ್ಳುವಂತೆ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.
Kshetra Samachara
30/06/2022 07:44 pm