ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ತಡರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳ ಕಳವು: ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಬೆಂಗಳೂರು ನಗರದ ಹೊರವಲಯದಲ್ಲಿ ತಡರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳನ್ನ ಕಳ್ಳರು ಕದಿಯುವ ಎರಡು ಪ್ರತ್ಯೇಕ ಪ್ರಕರಣಗಳು ನೆಡೆದಿದೆ.

ಕಳ್ಳರು ಬೈಕ್ ಎಗರಿಸುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನೂ ಬೆಂಗಳೂರು ನಗರದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್ ನಿವಾಸಿ ಗಿರೀಶ್ ಎಂಬುವರಿಗೆ ಸೇರಿದ ಪಲ್ಸರ್ ಬೈಕ್ ಕಳುವಾಗಿದ್ರೆ, ಅದೇ ಕೆಲ ಸಮಯಕ್ಕೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಗಿ ತಿರುಮಲಾಪುರದ ನಿವಾಸಿ ಮಂಜುನಾಥ್ ಎಂಬುವರಿಗೆ ಸೇರಿದ ಸ್ಪ್ಲೆಂಡರ್ ಬೈಕ್‌ ಎಗರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಸಂಬಂಧ ಎರಡು ಪ್ರತ್ಯೇಕ ಬೈಕ್ ಕಳವು ಪ್ರಕರಣಗಳು ಬಾಗಲಗುಂಟೆ ಮತ್ತು ಸೋಲದೇವನಹಳ್ಳಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿಕೊಂಡು, ಸಿಸಿ ಕ್ಯಾಮೆರಾ ದೃಶ್ಯ ಆಧರಿಸಿ ಆರೋಪಿಗಳಿಗೆ ಬಲೆ ಬೀಸಲು ಪೊಲೀಸ್ರು ಮುಂದಾಗಿದ್ದಾರೆ.

Edited By : Somashekar
PublicNext

PublicNext

11/09/2022 01:23 pm

Cinque Terre

36.97 K

Cinque Terre

0

ಸಂಬಂಧಿತ ಸುದ್ದಿ