ಆನೇಕಲ್ :ಆನೇಕಲ್ ತಾಲ್ಲೂಕಿನ ಇಂಡ್ಲವಾಡಿ ಗ್ರಾಮದಲ್ಲಿರುವ ಕನಕ ಭವನದ ಆವರಣದಲ್ಲಿ ಡಾ ರಾಮ್ ಮನೋಹರ್ ಲೋಹಿಯಾ ಕಾನೂನು ವಿದ್ಯಾಲಯ ಮತ್ತು ಆನೇಕಲ್ ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ಆನೇಕಲ್ ವಕೀಲರ ಸಂಘ, ಪೋಲಿಸ್ ಇಲಾಖೆ ಸಹಯೋಗದಲ್ಲಿ ಮಾದಕ ವ್ಯಸನದ ಕುರಿತು ಜಾಗೃತಿ ಹಾಗೂ ಉಚಿತ ಕಾನೂನು ಅರಿವು ನೆರವು ಕಾರ್ಯಕ್ರಮ ಆಯೋಜಿಸಲಾಗಿತ್ತು.
ಇನ್ನು ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾದೀಶರಾದ ಶ್ರೀಯುತ ಶ್ರೀ ಕಂಠ ರವರು, ಡಾರಾಮ್ ಮನೋಹರ್ ಲೋಹಿಯಾ ಕಾನೂನು ವಿದ್ಯಾಲಯದ ಪ್ರಾಂಶುಪಾಲರಾದ ಪ್ರೋಪೆಸರ್ ವಿಜಯ ಲಷ್ಮೀ, ಸರ್ಕಾರಿ ಅಭಿಯೋಜಕರಾದ ಆರ್.ಚಂದ್ರಶೇಖರ್, ಆನೇಕಲ್ ವಕೀಲರ ಸಂಘದ ಅಧ್ಯಕ್ಷ ರಮೇಶ್, ಪ್ರಧಾನ ಕಾರ್ಯದರ್ಶಿ ಇಂಡ್ಲವಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬೆಟ್ಟಪ್ಪ, ಸದಸ್ಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
Kshetra Samachara
22/09/2022 11:26 pm