ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಲೇಖಕಿ ಬಿ.ಟಿ. ಲಲಿತಾ ನಾಯಕ್‌ಗೆ ಮತ್ತೊಂದು ಜೀವ ಬೆದರಿಕೆ ಪತ್ರ!

ವರದಿ: ರಂಜಿತಾಸುನಿಲ್

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ಮಾಜಿ ಸಚಿವೆ ಮತ್ತು ಲೇಖಕಿ ಬಿ.ಟಿ. ಲಲಿತಾ ನಾಯಕ್ ಅವರಿಗೆ ಮತ್ತೊಂದು ಬೆದರಿಕೆ ಪತ್ರ ಫೋಸ್ಟ್ ಮೂಲಕ ಅವರ ಮನೆ ವಿಳಾಸಕ್ಕೆ ಬಂದಿದೆ.

ಎಡಪಂಥೀಯ ಸಿದ್ದಾಂತಗಳಿಗೆ ಬೆಂಬಲ ನೀಡುತ್ತಿದ್ದು, ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಮಧ್ಯ ಪ್ರವೇಶಿಸುತ್ತಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ, ಹೆಚ್ ಡಿ ಕುಮಾರಸ್ವಾಮಿ ಅವರೊಂದಿಗೆ ನಿಮ್ಮನ್ನೂ ಕೊಲೆ ಮಾಡಲಾಗುವುದು ಎಂದು ದುಷ್ಕರ್ಮಿಗಳು ಕಪ್ಪುಇಂಕ್ ಬಳಸಿ ಕನ್ನಡದಲ್ಲಿ ಬರೆದಿದ್ದಾರೆ.

ಈ ಸಂಬಂಧ ಸಂಜಯ ನಗರ ಪೊಲೀಸರು ಕೇಸ್ ದಾಖಲಿಸಿದ್ದು, ಬಿ.ಟಿ.ಲಲಿತಾ ನಾಯಕ್ ಅವರ ನಿವಾಸಕ್ಕೆ ಭದ್ರತೆ ಒದಗಿಸಲಾಗಿದೆ. ರಾಜಾಜಿನಗರದಿಂದ ಫೋಸ್ಟ್ ಬಂದಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾಲ್ಕು ಬೆದರಿಕೆ ಪತ್ರವನ್ನು ಸಂಜಯ ನಗರ ಪೊಲೀಸರಿಗೆ ನೀಡಿದ್ದೇನೆ. ಪತ್ರದಲ್ಲಿ ಸಿದ್ದರಾಮಯ್ಯ, ಕುಮಾರಸ್ವಾಮಿ, ಬಿಕೆ ಹರಿಪ್ರಸಾದ್, ಬರಗೂರು ರಾಮಚಂದ್ರಪ್ಪ ಸೇರಿದಂತೆ ಹಲವರ ಹೆಸರುಗಳಿವೆ. ಎಡಪಂಥೀಯ ವಿಚಾರೆಧಾರೆಗಳು ಮತ್ತು ಮುಸ್ಲಿಂ ಸಂಘಟನೆಗಳಿಗೆ ಬೆಂಬಲ ನೀಡುತ್ತಿರುವುದರ ವಿರುದ್ಧ ಎಚ್ಚರಿಕೆ ನೀಡಲಾಗಿದೆ. ಇಂತಹ ಬೆದರಿಗೆ ನಾನು ಕೇರ್ ಮಾಡಲ್ಲ, ನನ್ನ ಅಭಿಪ್ರಾಯ ನೀಡುವುದನ್ನು ಮುಂದುವರೆಸುತ್ತೇನೆ, ಸತ್ಯವನ್ನು ಮಾತನಾಡುತ್ತೇನೆ ಎಂದಿದ್ದಾರೆ.

Edited By : PublicNext Desk
Kshetra Samachara

Kshetra Samachara

04/07/2022 08:22 pm

Cinque Terre

1.57 K

Cinque Terre

0

ಸಂಬಂಧಿತ ಸುದ್ದಿ