ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮೇ 16ರಂದು ಹೊಸಕೋಟೆ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವಕ್ಕೆ ಪೊಲೀಸ್‌ ಭದ್ರತೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದಲ್ಲಿ ನಾಳೆ (ಮೇ 16)ರಂದು ಇತಿಹಾಸ ಪ್ರಸಿದ್ಧ ಅವಿಮುಕ್ತೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಹಾಗೂ ಕರಗ ಮಹೋತ್ಸವಕ್ಕೆ ನಡೆಯಲಿದೆ. ಸಾವಿರಾರು ಜನ ಸೇರುವ ಹಿನ್ನಲೆ ಯಾವುದೇ ಅಹಿತಕರ ಘಟನೆ ನಡೆಯದಿರಲಿ ಎಂದು ಹೊಸಕೋಟೆ ಪೊಲೀಸರು ಭಾರಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದ್ದಾರೆ.

ಹೊಸಕೋಟೆಯ 400ಕ್ಕೂ ಹೆಚ್ಚು ಪೊಲೀಸರು ಭದ್ರತೆಗೆ ನಿಯೋಜನೆಗೊಂಡಿದ್ದಾರೆ. ಇಂದು ಭದ್ರತೆ ಬಗ್ಗೆ ಜಾಗೃತಿ‌ ಮೂಡಿಸಲು ನೂರಾರು ಜನ ಪೊಲೀಸರು ನಗರದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಸಿದರು. ಬ್ರಹ್ಮರಥೋತ್ಸವದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮದಂತೆ ನಗರದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ‌ ನಡೆಯಿತು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಇನ್ಸ್‌ಪೆಕ್ಟರ್‌ಗಳು, ಸಬ್ ಇನ್ಸ್‌ಪೆಕ್ಟರ್‌ಗಳಿಂದ ಪಥಸಂಚಲನ ಸಾಗಿತು. ಪೊಲೀಸರ ಪಥಸಂಚಲನವನ್ನು ಕಣ್ತುಂಬಿಕೊಳ್ಳುವುದೇ ಅತ್ಯದ್ಭುತವಾಗಿತ್ತು.

SureshBabu Public Next ಹೊಸಕೋಟೆ..

Edited By : Manjunath H D
Kshetra Samachara

Kshetra Samachara

15/05/2022 10:29 pm

Cinque Terre

4.71 K

Cinque Terre

0

ಸಂಬಂಧಿತ ಸುದ್ದಿ