ಬೆಂಗಳೂರು : ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡದಿರಲೆಂದು ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರು ನಮ್ಮ ಜನ ಮಾತ್ರ ಬದಲಾಗುತ್ತಿಲ್ಲ ರೂಲ್ಸ್ ಫಾಲೋ ಮಾಡುತ್ತಿಲ್ಲ. ಹಾಗಾಗಿಯೇ ಬೆಂಗಳೂರಿನಲ್ಲಿ ನಿತ್ಯ ಸುಮಾರು 20 ಸಾವಿರ ಸವಾರರು ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುತ್ತಾರೆ. ಹೀಗೆ ನಿಯಮ ಉಲ್ಲಂಘಿಸಿದವರಿಗೆ ನೋಟಿಸ್ ಕೊಡುವುದು ಸಂಚಾರ ಪೊಲೀಸ್ ಇಲಾಖೆಗೆ ತಲೆ ನೋವಾಗಿ ಪರಿಣಮಿಸಿದೆ.
ಸದ್ಯ ಇಲಾಖೆ ರೂಲ್ಸ್ ಬ್ರೇಕ್ ಮಾಡುವವರಿಗೆ ಬಿಸಿ ಮುಟ್ಟಿಸಲು ಮತ್ತೊಂದು ಕ್ರಮ ಜಾರಿಗೊಳಿಸಿದೆ.
ಹೌದು ಬೆಂಗಳೂರು ಟ್ರಾಫಿಕ್ ಪೊಲೀಸರು ಪ್ರಾಯೋಗಿಕವಾಗಿ ಯೋಜನೆಯೊಂದನ್ನು ಪ್ರಾರಂಭಿಸಿದ್ದಾರೆ. ಇದರ ಅಡಿಯಲ್ಲಿ ಸಂಚಾರ ನಿಯಮಗಳ ಉಲ್ಲಂಘನೆಗಾಗಿ ವಾಹನ ಮಾಲೀಕರಿಗೆ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ.
ನಗರದಲ್ಲಿ ನಿತ್ಯ ಸರಾಸರಿ 20,000 ನೋಟಿಸ್ ಗಳನ್ನು ನೀಡಲಾಗುತ್ತಿದೆ. ಇದರ ವೆಚ್ಚವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ SMS ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಜಂಟಿ ಪೊಲೀಸ್ ಆಯುಕ್ತ (ಸಂಚಾರ) ರವಿಕಾಂತೇಗೌಡ ತಿಳಿಸಿದ್ದಾರೆ.
Kshetra Samachara
06/12/2021 09:20 am