ಬೆಂಗಳೂರು: ಸಾರ್ವಜನಿಕವಾಗಿ ಹೊಸ ವರ್ಷಾಚರಣೆಗೆ ಅವಕಾಶ ಇಲ್ಲ. ಈಗಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಈಗಾಗಲೇ ಗೈಡ್‌ಲೈನ್ ನೀಡಿದ್ದಾರೆ. ಇದೇ ಗೈಡ್‌ಲೈನ್ ಪ್ರಕಾರವೇ ಎಲ್ಲ ನಡೆಯಲಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಬ್ ರೆಸ್ಟೋರೆಂಟ್‌ಗಳಲ್ಲಿ ಶೇಕಡಾ 50ರಷ್ಟು ಅವಕಾಶ ಇರಲಿದೆ. ಯಾವುದೇ ವಿಶೇಷ ಕಾರ್ಯಕ್ರಮಗಳು ಆಯೋಜನೆ ಮಾಡುವಂತಿಲ್ಲ. ಕಳೆದ ವರ್ಷದಂತೆ ಈ ಬಾರಿಯೂ ಪೊಲೀಸ್ ಇಲಾಖೆ ಕಾರ್ಯ ನಿರ್ವಹಿಸಲಿದೆ. ಅನಾವಶ್ಯಕ ಓಡಾಟ ಸುತ್ತಾಟಕ್ಕೆ ನಗರದಲ್ಲಿ ಅವಕಾಶ ಇರೋದಿಲ್ಲ ಎಂದಿದ್ದಾರೆ.
ಡಿಸೆಂಬರ್ 31ರ ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಕಮಲ್ ಪಂತ್, ಇದುವರೆಗೂ ಯಾರೂ ಕೂಡ ಬಂದ್ ಮಾಡುವ ಬಗ್ಗೆ ಅನುಮತಿ ಕೇಳಿಲ್ಲ. ಅನುಮತಿ ಕೇಳಿದ್ರೆ ಆ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಕಾನೂನು ರೀತಿ ಯಾವ ಕ್ರಮ ತೆಗೆದುಕೊಳ್ಳಬೇಕೋ ಅದನ್ನ ಬೆಂಗಳೂರು ಪೊಲೀಸರು ತೆಗೆದುಕೊಳ್ತಾರೆ. ಎಂದು ಕಮಲ್ ಪಂತ್ ಹೇಳಿದ್ದಾರೆ.
Kshetra Samachara
25/12/2021 04:09 pm