ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೆ.ಆರ್.ಪುರ: ಬಿಬಿಎಂಪಿಯಿಂದ ಏಕಾಏಕಿ ಫುಟ್‌ ಪಾತ್‌ ತೆರವು; ವ್ಯಾಪಾರಿಗಳು ಕಂಗಾಲು, ಆಕ್ರೋಶ

ಕೆ.ಆರ್‌. ಪುರ: ಬಿಬಿಎಂಪಿ ಅಧಿಕಾರಿಗಳು ಯಾವುದೇ ನೋಟಿಸ್ ನೀಡದೆ ಏಕಾಏಕಿ ಪಾದಚಾರಿ ಮಾರ್ಗ ತೆರವು ಮಾಡಲು ಮುಂದಾಗಿದ್ದಾರೆಂದು ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆ.ಆರ್. ಪುರಂನ ಮಣಿಪಾಲ್ ಆಸ್ಪತ್ರೆಯಿಂದ ಐಟಿಪಿಎಲ್ ವರೆಗಿನ ಪಾದಚಾರಿ ಮಾರ್ಗದಲ್ಲಿ ಹಲವು ವರ್ಷಗಳಿಂದ ಕೆಲ ಸಣ್ಣಪುಟ್ಟ ವ್ಯಾಪಾರಿಗಳು ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಆದರೆ, ಇಂದು ಬೆಳಗ್ಗೆ ಬಿಬಿಎಂಪಿ ಅಧಿಕಾರಿಗಳು ಮಹದೇವಪುರ ಪೊಲೀಸ್ ಠಾಣೆ ಅಧಿಕಾರಿಗಳ ನೇತೃತ್ವದಲ್ಲಿ ಎಇಇ ಕುಬೇರಪ್ಪ, ವ್ಯಾಪಾರಿಗಳು ತಯಾರಿಸಿದ ಆಹಾರ ಪದಾರ್ಥಗಳನ್ನು ಬಿಸಾಡುವ ಮೂಲಕ ಅಮಾನವೀಯವಾಗಿ ವರ್ತಿಸಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

28/12/2021 03:57 pm

Cinque Terre

880

Cinque Terre

0

ಸಂಬಂಧಿತ ಸುದ್ದಿ