ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ರಸ್ತೆ ಗುಂಡಿ ಮುಚ್ಚದ ಬಿಬಿಎಂಪಿ ಹೈಕೋರ್ಟ್ ಕೆಂಡಾಮಂಡಲ

ಬೆಂಗಳೂರು : ಬಿಬಿಎಂಪಿ ನಿರ್ಮಿಸಿದ ರಸ್ತೆಗಳಲ್ಲಿ ಗುಂಡಿ ವಿಚಾರವಾಗಿ ಹೈಕೋರ್ಟ್​ಗೆ ಬಿಬಿಎಂಪಿ ಮುಖ್ಯ ಇಂಜಿನಿಯರ್ ಹಾಜರಾಗಿದ್ದಾರೆ. ಬಿಬಿಎಂಪಿ ಕೈಗೊಂಡ ಕ್ರಮದ ಬಗ್ಗೆ ಹೈಕೋರ್ಟ್ ಅತೃಪ್ತಿ ವ್ಯಕ್ತಪಡಿಸಿದೆ. ರಸ್ತೆ ಗುಂಡಿಯಿಂದ 9 ಜನರು ಪ್ರಾಣ ಕಳೆದುಕೊಂಡಿದ್ದಾರೆ. ನಿಮ್ಮ ಮುಖ್ಯ ಇಂಜಿನಿಯರ್ ಮೇಲೇಕೆ FIR ದಾಖಲಿಸಬಾರದು. ನಿಮ್ಮ ಇಂಜಿನಿಯರ್​ಗಳು ಜೈಲಿಗೆ ಹೋಗಲಿ. ಇಂಜಿನಿಯರ್​ಗಳು ಜನರ ಜೀವನದ ಜೊತೆ ಆಟವಾಡುತ್ತಿದ್ದಾರೆ. ಪ್ರತಿ ಮಳೆಯ ನಂತರ ರಸ್ತೆ ಗುಂಡಿಗಳು ಏಕಾಗುತ್ತವೆ. ಡಾಂಬರು ಗುಣಮಟ್ಟ ಕಾಪಾಡದವರ ಮೇಲಿನ ಕ್ರಮವೇನು ಎಂದು ಹೈಕೋರ್ಟ್ ಪ್ರಶ್ನೆ ಮಾಡಿದೆ.

ಇಂತಹ ಕೆಟ್ಟ ದುರಸ್ತಿ ಮಾಡಲು ಎಂತಹ ತಂತ್ರಜ್ಞಾನ ಬಳಸುತ್ತೀರಿ. ಜನರ ತೆರಿಗೆ ಹಣ ವ್ಯರ್ಥವಾಗುತ್ತಿರುವ ಬಗ್ಗೆ ಆತಂಕವಿದೆ. ರಿಪೇರಿಯಾದ ರಸ್ತೆಗಳೇ ಗುಂಡಿ ಏಕೆ ಬೀಳುತ್ತಿವೆ. ಕಳಪೆ ರಸ್ತೆಗಳಿಗೆ ಕಾರಣರಾದ ಅಧಿಕಾರಿಗಳನ್ನು ಬಿಡಲ್ಲ ಎಂದು ಬಿಬಿಎಂಪಿಗೆ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಎಚ್ಚರಿಕೆ ನೀಡಿದ್ದಾರೆ.

ಬಿಬಿಎಂಪಿ ಮುಖ್ಯ ಇಂಜಿನಿಯರ್ ಬಿ.ಎಸ್. ಪ್ರಹ್ಲಾದ್​ರನ್ನು ಹೈ ತರಾಟೆಗೆ ತೆಗೆದುಕೊಳ್ಳಲಾಗಿದೆ. ನೀವು ಯಾಂತ್ರಿಕ ಗುಂಡಿ ಮುಚ್ಚುವ ಯಂತ್ರ ಬಳಸಿದ್ದೀರಾ ಎಂಬ ಹೈಕೋರ್ಟ್ ಪ್ರಶ್ನೆಗೆ ಪ್ರಹ್ಲಾದ್ ಗೊಂದಲಕಾರಿ ಉತ್ತರ ನೀಡಿದ್ದಾರೆ. ಮೊದಲಿಗೆ ಹೌದು ಎಂದು ನಂತರ ಇಲ್ಲ ಎಂದು ಹೇಳಿದ್ದಾರೆ. ಬಿಬಿಎಂಪಿ ಮುಖ್ಯ ಇಂಜಿನಿಯರ್​ಗೆ ಹೈಕೋರ್ಟ್ ತಪರಾಕಿ ಹಾಕಿದೆ. ನ್ಯಾಯಾಲಯದ ದಾರಿ ತಪ್ಪಿಸಲು ಯತ್ನಿಸಿದರೆ ಹುಷಾರ್, ಇಲ್ಲಿಂದಲೇ ನಿಮ್ಮನ್ನು ಜೈಲಿಗೆ ಕಳುಹಿಸ್ತೇವೆಂದು ಎಚ್ಚರಿಕೆ ನೀಡಿದ್ದಾರೆ. ನೀವು ಕೋರ್ಟ್​ನಲ್ಲಿದ್ದೀರಾ ಎಚ್ಚರವಿರಲಿ ಎಂದು ಕೋರ್ಟ್ ಹೇಳಿದೆ. ಮುಖ್ಯ ಇಂಜಿನಿಯರ್​ಗೆ ಸಿಜೆ ರಿತುರಾಜ್ ಅವಸ್ತಿ ತರಾಟೆ ತೆಗೆದುಕೊಂಡಿದ್ದಾರೆ.

ನೀವು ಹವಾನಿಯಂತ್ರಿತ ಕೊಠಡಿಯಲ್ಲಿ ಕೂತಿರುತ್ತೀರಿ. ಜನರ ಕಷ್ಟಗಳ ಬಗ್ಗೆ ನಿಮಗೆ ಅರಿವಿಲ್ಲ ಎಂದು ಮುಖ್ಯ ಇಂಜಿನಿಯರ್ ಪ್ರಹ್ಲಾದ್​ಗೆ ಹೈಕೋರ್ಟ್ ತಪರಾಕಿ ಹಾಕಿದೆ. ಈ ಬಗ್ಗೆ ಬಿಬಿಎಂಪಿ ವಕೀಲ ವಿ. ಶ್ರೀನಿಧಿ 1 ವಾರ ಸಮಯ ಕೋರಿದ್ದಾರೆ. ಫೆಬ್ರವರಿ 15ಕ್ಕೆ ಹೈಕೋರ್ಟ್ ವಿಚಾರಣೆ ಮುಂದೂಡಿದೆ. ರಸ್ತೆ ಗುಂಡಿ ಮುಚ್ಚುವ ನೀಲನಕ್ಷೆಗೆ ಕೋರ್ಟ್​​ ಸೂಚನೆ ನೀಡಿದೆ. ಯಾಂತ್ರಿಕ ರಸ್ತೆ ಗುಂಡಿ ಮುಚ್ಚುವ ತಂತ್ರಜ್ಞಾನ ಬಳಸಿ, ಗುಣಮಟ್ಟ ಉತ್ತಮವಾಗಿದ್ದರೆ ಮಾತ್ರ ಈ ತಂತ್ರಜ್ಞಾನ ಬಳಸಿ ಎಂದು ಬಿಬಿಎಂಪಿ ಮುಖ್ಯ ಇಂಜಿನಿಯರ್ ಹಾಜರಿಗೆ ಸೂಚನೆ ನೀಡಿದೆ.

Edited By :
PublicNext

PublicNext

07/02/2022 07:29 pm

Cinque Terre

13.54 K

Cinque Terre

1

ಸಂಬಂಧಿತ ಸುದ್ದಿ