ದೊಡ್ಡಬಳ್ಳಾಪುರ : ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ತೀವ್ರ ಸ್ವರೂಪ ಪಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶ ಹರಿಬಿಟ್ಟಲ್ಲಿ ಕೇಸ್ ಹಾಕಿ ಜೈಲಿಗೆ ಕಳಿಸುವುದಾಗಿ ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೋನಾ ವಂಶಿಕೃಷ್ಣ ಎಚ್ಚರಿಕೆ ನೀಡಿದ್ದಾರೆ.
ಇನ್ನೂ ಶಾಲೆಗಳ ಅವರಣದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು,ಖುದ್ದು ಡಾ.ಕೋನಾ ವಂಶಿಕೃಷ್ಣ ದೊಡ್ಡಬಳ್ಳಾಪುರ ನಗರದ ಜೂನಿಯರ್ ಕಾಲೇಜ್ ಗೆ ಭೇಟಿ ನೀಡಿದರು.
ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆದಿಲ್ಲ ಶಾತಿಯುತ ವಾತಾವರಣ ಇದೆ, ಮೂರು ದಿನಗಳ ಹಿಂದೆಯೇ ಜಿಲ್ಲಾಧಿಕಾರಿ ಸೇರಿದಂತೆ ಹಲವು ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದ್ದ ಪ್ರತಿ ತಾಲೂಕಿಗೂ ನೋಡಲ್ ಅಧಿಕಾರಿಗಳನ್ನ ನೇಮಕ ಮಾಡಲಾಗಿದೆ, ಶಿಕ್ಷಕರು ಸಹ ಉತ್ತಮ ಸಹಕಾರ ನೀಡಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗಾವಹಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನ ಹರಿಬಿಟ್ಟಲ್ಲಿ ಅಂತವರ ಮೇಲೆ ಕೇಸ್ ಹಾಕಿ ಜೈಲಿಗೆ ಕಳಿಸಲಾಗುವುದೆಂದು ಎಚ್ಚರಿಕೆ ನೀಡಿದರು.
ಇನ್ನೂ ಮೂರು ದಿನಗಳ ವರೆಗೂ ಶಾಲೆಗಳ ಬಳಿ ಬಂದೋಬಸ್ತ್ ಮಾಡಲಾಗುವುದು ನಂತರ ಕಾಲೇಜ್ ಗಳು ಸಹ ಆರಂಭವಾಗುವುದರಿಂದ ಪೊಲೀಸ್ ಬಂದೋಬಸ್ತ್ ಹೆಚ್ಚು ಮಾಡಲಾಗುವುದು ಎಂದರು.
PublicNext
14/02/2022 09:55 pm