ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು:ಬಿಬಿಎಂಪಿ ಚುನಾವಣೆ - ತುರ್ತು ವಿಚಾರಣೆ ಸುಪ್ರೀಂ ಸಮ್ಮತಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಅರ್ಜಿಗಳ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿ ನೀಡಿದೆ.

ಪಾಲಿಕೆಗೆ ಶೀಘ್ರವೇ ಚುನಾವಣೆ ನಡೆಸಲು ಆದೇಶಿಸುವಂತೆ ಕೋರಿ ಚುನಾವಣಾ ಆಕಾಂಕ್ಷಿಗಳು ಸಲ್ಲಿಸಿರುವ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್.ವಿ ರಮಣ, ನ್ಯಾಯಮೂರ್ತಿ ಎ.ಎಸ್ ಬೋಪಣ್ಣ ಹಾಗೂ ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರಿದ್ದ ಪೀಠ, ತುರ್ತು ವಿಚಾರಣೆಗೆ ಸಮ್ಮತಿಸಿರುವುದಾಗಿ ತಿಳಿದು ಬಂದಿದೆ.

ಅರ್ಜಿದಾರರ ಪರ ಹಿರಿಯ ವಕೀಲೆ ಮೀನಾಕ್ಷಿ ಅರೋರ ವಾದ ಮಂಡಿಸಿ, ಬಿಬಿಎಂಪಿ ಚುನಾಯಿತ ಸದಸ್ಯರ ಅವಧಿ 2020ಕ್ಕೆ ಮುಕ್ತಾಯವಾಗಿದೆ. ಆದರೆ, ಸುಪ್ರೀಂಕೋರ್ಟ್ ತಡೆಯಾಜ್ಞೆ ಪರಿಣಾಮ ಪಾಲಿಕೆಗೆ ಚುನಾವಣೆ ನಡೆಸಿಲ್ಲ ಎಂದು ವಿವರಿಸಿದರು.

ವಾದ ಪರಿಗಣಿಸಿದ ಪೀಠ, ದೇಶದಲ್ಲಿ ಹಲವು ಚುನಾವಣೆಗಳು ನಡೆದಿವೆ. ನಿಮ್ಮ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಪರಿಗಣಿಸುತ್ತೇವೆ ಎಂದು ಪೀಠ ತಿಳಿಸಿದೆ. ಬಿಬಿಎಂಪಿ ವಾರ್ಡ್​ಗಳನ್ನು ಹೆಚ್ಚಿಸುವ ಕಾರಣ ನೀಡಿದ್ದ ಸರ್ಕಾರ, ಪಾಲಿಕೆಯ ಅವಧಿ ಮುಗಿದ ನಂತರವೂ ಚುನಾವಣೆ ನಡೆಸಿರಲಿಲ್ಲ.

ಈ ಹಿನ್ನೆಲೆಯಲ್ಲಿ ಬಿಬಿಎಂಪಿಗೆ ಚುನಾವಣೆ ನಡೆಸುವಂತೆ ಕಾಂಗ್ರೆಸ್ ಪಕ್ಷದ ಬಿಬಿಎಂಪಿ ಮಾಜಿ ಸದಸ್ಯ ಎಂ.ಶಿವರಾಜು ಹಾಗೂ ರಾಜ್ಯ ಚುನಾವಣಾ ಆಯೋಗ ಪ್ರತ್ಯೇಕವಾಗಿ ಹೈಕೋರ್ಟ್​ಗೆ ಪಿಐಎಲ್ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ವಿಭಾಗೀಯ ಪೀಠ, ಪಾಲಿಕೆಗೆ ಚುನಾವಣೆ ನಡೆಸಲು 2020ರ ಡಿ.4ರಂದು ಆದೇಶಿಸಿತ್ತು. ಅದನ್ನು ಪ್ರಶ್ನಿಸಿ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.‌

Edited By :
PublicNext

PublicNext

18/02/2022 07:32 pm

Cinque Terre

13.18 K

Cinque Terre

0

ಸಂಬಂಧಿತ ಸುದ್ದಿ