ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ನಾಳೆ ಹಿಜಾಬ್ ತೀರ್ಪು- ನಗರದಲ್ಲಿ ಪೊಲೀಸ್ ಸರ್ಪಗಾವಲು

ಬೆಂಗಳೂರು: ರಾಜ್ಯದಲ್ಲಿ ಗೊಂದಲ ಸೃಷ್ಟಿಸಿದ್ದ ಹಿಜಾಬ್ ವಿವಾದ ಅಂತಿಮ ಘಟ್ಟ ತಲುಪಿದ್ದು, ನಾಳೆ (ಮಂಗಳವಾರ) ಬೆಳಗ್ಗೆ 10.30ಕ್ಕೆ ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲಾ ಡಿಸಿಪಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕಮಲ್​ ಪಂತ್​ ಸಂವಾದ ನಡೆಸಿದ್ದು, ಸಭೆ ಬಳಿಕ ಎಲ್ಲಾ ಶಾಲಾ ಕಾಲೇಜುಗಳ ಬಳಿ ಭದ್ರತೆ ಹೆಚ್ಚಳಕ್ಕೆ ಸೂಚಿಸಿದ್ದಾರೆ.

ಹಿಜಾಬ್ ಹೈಕೋರ್ಟ್ ತೀರ್ಪು ಹಿನ್ನೆಲೆ ನಾಳೆಯಿಂದ ಒಂದು ವಾರ ನಗರದಾದ್ಯಂತ ಸೆಕ್ಷನ್ 144 ಜಾರಿಮಾಡಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರಲ್ಲಿ ಭದ್ರತೆಗೆ 10,000ಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗುವುದು. ಬೆಂಗಳೂರಿನಲ್ಲಿ ಯಾವುದೇ ಪ್ರತಿಭಟನೆ, ರ್‍ಯಾಲಿಗೆ ಅವಕಾಶವಿಲ್ಲ. ಹೆಚ್ಚುವರಿಯಾಗಿ ಕೆಎಸ್​ಆರ್​ಪಿ, ಸಿಎಆರ್ ತುಕಡಿ ನಿಯೋಜನೆ ಮಾಡಲಾಗುತ್ತೆ. ಹೈಕೋರ್ಟ್​ ಆದೇಶ ಎಲ್ಲರೂ ಗೌರವಿಸಬೇಕು ಎಂದು ಕಮಿಷನರ್ ಕಮಲ್ ಪಂತ್ ತಿಳಿಸಿದ್ದಾರೆ.

Edited By : Manjunath H D
PublicNext

PublicNext

14/03/2022 08:39 pm

Cinque Terre

45.02 K

Cinque Terre

2

ಸಂಬಂಧಿತ ಸುದ್ದಿ