ಬೆಂಗಳೂರು: ಹಿಜಾಬ್ ತೀರ್ಪು ವಿರೋಧಿಸಿ ಕೆಲ ಮುಸ್ಲಿಂ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ಕೊಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಲವು ಏರಿಯಾಗಳಲ್ಲಿ ಬಂದ್ ಯಶಸ್ವಿಯಾಗಿದೆ.
ಶಾಂತಿಯುತವಾಗಿ ಬಂದ್ ಆರಂಭಿಸಿರುವ ಮುಸ್ಲಿಂ ಸಮುದಾಯ ಕೆಲವು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆ ಮಾಡುತ್ತಿದೆ.
ಇನ್ನು ಬಂದ್ ಹಿನ್ನೆಲೆಯಲ್ಲಿ ನಗರದ ಸೂಕ್ಷ್ಮಪ್ರದೇಶಗಳಾದ ಡಿಜೆಹಳ್ಳಿ, ಕೆಜಿ ಹಳ್ಳಿಯಲ್ಲಿ ರೂಟ್ ಮಾರ್ಚ್ ನಡೆಸಿದ ಪೊಲೀಸರು ರಸ್ತೆಗಿಳಿದು ಪ್ರತಿಭಟನೆ ನಡೆಸದಂತೆ ಎಚ್ಚರಿಕೆ ನೀಡಿದ್ದಾರೆ.
ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಸೆಕ್ಷನ್ 144 ಜಾರಿಯಲ್ಲಿದೆ. ಇನ್ನು ಪ್ರತಿಭಟನೆ ಬೆಂಬಲ ಸೂಚಿಸಿ ಕೆಲ ಮುಸ್ಲಿಂ ನಾಗರಿಕರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟು ಕ್ಲೋಸ್ ಮಾಡಿದ್ದಾರೆ.
Kshetra Samachara
17/03/2022 03:40 pm