ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರಿನ ಈ ಏರಿಯಾದಲ್ಲಿ ಮದ್ಯ ಮಾರಾಟ ನಿಷೇಧ !

ಬೆಂಗಳೂರು: ಸಿಲಿಕಾನ್ ಸಿಟಿಯ ಎರಡು ಏರಿಯಾದಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧಿಸಲಾಗಿದೆ. ಇದಕ್ಕೆ ಒಂದು ಬಲವಾದ ಕಾರಣವೂ ಇದೆ. ಬನ್ನಿ, ಹೇಳ್ತೀವಿ.

ಕೋದಂಡರಾಮಸ್ವಾಮಿ ಪಲ್ಲಕ್ಕಿ ಉತ್ಸವ ಇದೆ. ಈ ಹಿನ್ನೆಲೆಯಲ್ಲಿಯೇ ಎರಡು ದಿನ ಏಪ್ರಿಲ್ 11 ಮತ್ತು 12 ರಂದು ಹಲಸೂರು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಏಪ್ರಿಲ್ 13 ಹಾಗೂ 14 ರಂದು ಮುತ್ಯಾಲಮ್ಮ ದೇವಿ ರಥೋತ್ಸವ ಇದೆ. ಈ ಕಾರಣಕ್ಕೇನೆ ಭಾರತಿ ನಗರ ಠಾಣಾ ವ್ಯಾಪ್ತಿಯಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಈ ಬಗ್ಗೆ ಆದೇಶ ನೀಡಿದ್ದಾರೆ.

Edited By :
Kshetra Samachara

Kshetra Samachara

11/04/2022 11:36 am

Cinque Terre

4.01 K

Cinque Terre

0

ಸಂಬಂಧಿತ ಸುದ್ದಿ