ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಟಿಕಾಯತ್ ಗೆ ಮಸಿ ಬಳಿದ ಪ್ರಕರಣ: ಮಹಿಳಾ ಸಂಘಟನೆ ಅಧ್ಯಕ್ಷೆ ಉಮಾ ಬಂಧನ

ಬೆಂಗಳೂರು: ರಾಷ್ಟ್ರ ರೈತನಾಯಕ ರಾಜೇಶ್ ಟಿಕಾಯತ್ ಗೆ ಮಸಿ ಬಳಿದ ಪ್ರಕರಣದಲ್ಲಿ ಮಹಿಳಾ ಸಂಘಟನೆಯ ಅಧ್ಯಕ್ಷೆ ಉಮಾದೇವಿಯನ್ನ ಹೈಗ್ರೌಂಡ್ ಪೊಲೀಸರು ಬಂಧಿಸಿದ್ದಾರೆ.

ಈ ಹಿಂದೆ ಆರೋಪಿಗಳಾದ ಭರತ್ ಶೆಟ್ಟಿ, ಪ್ರದೀಪ್ ಮತ್ತು ಶಿವಕುಮಾರ್ ನ ವಿಚಾರಣೆಗೆ ಒಳಪಡಿಸಿದ್ರು. ತನಿಖೆ ವೇಳೆ ಉಮಾದೇವಿ ಕೈವಾಡ ಕಂಡುಬಂದಿದ್ದು ಪೊಲೀಸರು ಉಮಾದೇವಿಯನ್ನ ಬಂಧಿಸಿದ್ದಾರೆ.

ಘಟನೆ ದಿನ ಉಮಾದೇವಿ ಮುಂದೆ ನಿಂತು ಕೃತ್ಯ ನಡೆಸಿದ್ದಳು. ಅಲ್ಲದೇ ಉಮಾದೇವಿ ಮನೆ ಮೇಲೆ ದಾಳಿ ನಡೆಸಿದಾಗ ಮಾರಾಕಾಸ್ತ್ರಗಳು ಕೂಡ ಪತ್ತೆಯಾಗಿದೆ. ಸದ್ಯ ಉಮಾದೇವಿಯನ್ನ ಪೊಲೀಸ್ ಕಸ್ಟಡಿಗೆ ಪಡೆದು ಘಟನೆಗೆ ಯಾರು ಕುಮ್ಮಕ್ಕು ನೀಡಿದ್ರು, ಘಟನೆಗೆ ಕಾರಣ ಏನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Edited By : Vijay Kumar
PublicNext

PublicNext

06/06/2022 02:19 pm

Cinque Terre

17.59 K

Cinque Terre

0

ಸಂಬಂಧಿತ ಸುದ್ದಿ