ಬೆಂಗಳೂರು: ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಹೆನ್ನಾಗರ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಸರ್ವೆ ನಂಬರ್ 100ರಲ್ಲಿ 150ಕ್ಕೂ ಹೆಚ್ಚು ಮನೆಗಳನ್ನು ಅಕ್ರಮವಾಗಿ ನಿರ್ಮಾಣ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೇ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಆರ್. ಕೇಶವ ರೆಡ್ಡಿ ಸುದ್ದಿಗೋಷ್ಠಿ ಕರೆದು ಸ್ಪಷ್ಟನೆ ನೀಡಿದ್ದಾರೆ.
ಹೆನ್ನಾಗರ ಗ್ರಾಮ ಪಂಚಾಯಿತಿ ಕಾಚನಾಯಕನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾಜಿ ಅಧ್ಯಕ್ಷ ಆರ್.ಕೆ ಕೇಶವರೆಡ್ಡಿ ಹೇಳಿಕೆ ನಾನು ಪಂಚಾಯಿತಿ ಅಧ್ಯಕ್ಷರಾದ ಸಂದರ್ಭದಲ್ಲಿ ಸರ್ಕಾರಿ ಗೋಮಾಳ ಜಾಮೀನು ಒಂಬತ್ತು ಎಕರೆ ಆಶ್ರಯ ಯೋಜನೆ ಅಡಿಯಲ್ಲಿ ಸರ್ಕಾರ ಮಂಜೂರು ಮಾಡಲಾಗಿತ್ತು. ಜತೆಗೆ ಇಲ್ಲಿರುವ ಜನರ ಬಳಿ ಹಣ ಪಡೆದುಕೊಂಡ ಆರೋಪದ ಸುದ್ದಿ ಬಂದಿದೆ. ಇದು ಸತ್ಯಕ್ಕೆ ದೂರದ ಮಾತು ಸಿದ್ದರಾಮಯ್ಯ ಸರ್ಕಾರ ಇದ್ದಾಗ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಕಟ್ಟಿಕೊಂಡಿದ್ದರು. ಅಂತವರಿಗೆ ನಾನು ಸಹಾಯ ಮಾಡಿದ್ದೇನೆ. ನಾನು ಯಾರ ಬಳಿಯೂ ಕೂಡ ಹಣ ಪಡೆದುಕೊಂಡಿಲ್ಲ ದಾರಿ ಹೋಗವರಿಗೆಲ್ಲ ನಾನು ಪ್ರತಿಕ್ರಿಯೆ ಕೊಡಲಾಗುವುದಿಲ್ಲ. 94c ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮನೆಗಳನ್ನು ನಿರ್ಮಾಣ ಮಾಡ್ಕೊಂಡಿದ್ರು. ಅದಕ್ಕೆ ಹಕ್ಕು ಪತ್ರ ಮಾಡಿಕೊಳ್ಳೋದಕ್ಕೆ ನಾನು ಸಹಾಯ ಮಾಡಿದ್ದೇನೆ ಅಷ್ಟೇ. ಅದರಲ್ಲಿ ನನ್ನ ಪಾತ್ರ ಏನೂ ಇಲ್ಲ ಎಂದು ಸ್ಪಷ್ಟನೆ ನೀಡಿದರು.
PublicNext
24/06/2022 08:02 pm