ಬೆಂಗಳೂರು: ನಗರದಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ಗಳಿಗೆ ಕಮಿಷನರ್ ಶಾಕ್ ನೀಡಿದ್ದಾರೆ. ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ ತರಲಾಗಿದ್ದು, ಒಂದೇ ಕಚೇರಿ ಅಥವಾ ಠಾಣೆಯಲ್ಲಿ ಈ ಮೊದಲಿದ್ದ ಕನಿಷ್ಠ ಸೇವಾವಧಿ 6 ವರ್ಷದಿಂದ 5 ವರ್ಷಕ್ಕೆ ಇಳಿಕೆ ಮಾಡಿ ಆದೇಶ ಹೊರಡಿಸಲಾಗಿದೆ.
ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ನಿಶಾ ಜೇಮ್ಸ್ ಮೂಲಕ ಕಮಿಷನರ್ ಪ್ರತಾಪ್ ರೆಡ್ಡಿ ಅವರು ಆದೇಶ ಹೊರಡಿಸಿದ್ದಾರೆ. ನಗರದ ಕಮಿಷನರೇಟ್ ವ್ಯಾಪ್ತಿಯ ಕಾನ್ಸ್‌ಟೇಬಲ್ ಗಳಿಗೆ ಈ ನೂತನ ಆದೇಶ ಅನ್ವಯವಾಗಲಿದೆ. ಒಂದೇ ಕಡೆಗಳಲ್ಲಿ ಹಲವು ವರ್ಷಗಳಿಂದ ಕಾನ್ಸ್‌ಟೇಬಲ್ಸ್ ಕೆಲಸ ಮಾಡುತ್ತಿದ್ದಾರೆ. ಒಂದೇ ಕಡೆ ನೆಲಡಯುರಿದ್ದ ಸಿಬ್ಬಂದಿಗಳಲ್ಲಿ ಕೆಲವರು ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿರೋ ಆರೋಪ ಕೇಳಿ ಬಂದಿತ್ತು. ಜೊತೆಗೆ ಎಲ್ಲಾ ಸಿಬ್ಬಂದಿಗೂ ಕ್ರೈಂ ಮತ್ತು ಬೀಟ್ ಕರ್ತವ್ಯದಲ್ಲಿ ಸಮಾನತೆ ಕಪಾಡಿಕೊಳ್ಳಲು ಈ ಹೊಸ ಆದೇಶ ಹೊರಡಿಸಲಾಗಿದೆ. ಈ ಹಿನ್ನೆಲೆ ಕನಿಷ್ಠ 6 ವರ್ಷದಿಂದ 5 ವರ್ಷಕ್ಕೆ ಕಡಿತಗೊಳಿಸಿ ಆದೇಶ ಹೊರಡಿಸಲಾಗಿದೆ.
Kshetra Samachara
24/06/2022 10:34 pm