ಬೆಂಗಳೂರು : ನಗರದಲ್ಲಿ ಇನ್ಮುಂದೆ ವಾಹನಗಳ ದಾಖಲಾತಿ ಪರಿಶೀಲನೆ ಹೆಸರಿನಲ್ಲಿ ಪೊಲೀಸರು ಎಲ್ಲೆಂದರಲ್ಲಿ ವಾಹನ ಸವಾರರನ್ನ ತಡೆದು ನಿಲ್ಲಿಸದಂತೆ ರಾಜ್ಯ ಪೊಲೀಸ್ ಇಲಾಖೆಯ ಡಿಜಿ & ಐಜಿಪಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.
ರಸ್ತೆಯಲ್ಲಿ ಎಲ್ಲೆಂದರಲ್ಲಿ ವಾಹನ ತಡೆದು ಪರಿಶೀಲನೆ ನಡೆಸುವ ಪೊಲೀಸರ ಕ್ರಮದ ಕುರಿತು ಟ್ವಿಟರ್ ಬಳಕೆದಾರರೊಬ್ಬರು ಉಲ್ಲೇಖಿಸಿದ್ದರು.
ಈ ಹಿಂದೆ ಸಂಚಾರ ವಿಭಾಗದ ಕೆಲಸ ಮಾಡಿದ್ದ ಪ್ರವೀಣ್ ಸೂದ್ ದಾಖಲೆಗಳ ಪರಿಶೀಲನೆ ಹೆಸರಿನಲ್ಲಿ ಅನಾವಶ್ಯಕವಾಗಿ ವಾಹನಗಳನ್ನ ತಡೆದು ನಿಲ್ಲಿಸುವುದಕ್ಕೆ ಬ್ರೇಕ್ ಹಾಕಿದ್ದರು. ಈಗ ಡಿಜಿ & ಐಜಿಪಿಯಾಗಿರುವ ಅವರಿಂದ ಮತ್ತೊಮ್ಮೆ ಅದೇ ನಿಯಮ ನಿರೀಕ್ಷಿಸಬಹುದೇ ಎಂದು ಉಲ್ಲೇಖಿಸಿದ್ದರು.
ಈ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಡಿಜಿ & ಐಜಿಪಿ ಪ್ರವೀಣ್ ಸೂದ್ ಸಂಚಾರ ನಿಯಮಗಳನ್ನ ಉಲ್ಲಂಘಿಸಿದ ವಾಹನಗಳನ್ನ ದಾಖಲಾತಿ ಪರಿಶೀಲನೆ ಹೆಸರಿನಲ್ಲಿ ಅನಾವಶ್ಯಕ ತಡೆಯದಂತೆ ಸೂಚಿಸಿದ್ದು, ಕೇವಲ ಡ್ರಿಂಕ್ ಆ್ಯಂಡ್ ಡ್ರೈವ್ ಪರಿಶೀಲಿಸಬಹುದು ಎಂದು ನಗರ ಪೊಲೀಸ್ ಆಯುಕ್ತರು ಹಾಗೂ ಸಂಚಾರ ವಿಭಾಗದ ಜಂಟಿ ಆಯುಕ್ತರಿಗೆ ಟ್ಯಾಗ್ ಮಾಡುವ ಮೂಲಕ ಸೂಚಿಸಿದ್ದಾರೆ.
PublicNext
27/06/2022 06:04 pm