ಬೆಂಗಳೂರು: ಮುಸ್ಲಿಂ ಮೂಲಭೂತವಾದಿಗಳು ಅಂಗಡಿಯೊಂದಕ್ಕೆ ನುಗ್ಗಿ ಟೈಲರ್ ಕನ್ಹಯ್ಯ ಲಾಲ್ ಅವರ ಶಿರಚ್ಛೇದ ಮಾಡಿ, ತಮ್ಮ ದುಷ್ಕೃತ್ಯದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಪ್ರಕರಣ ದೇಶದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಸದ್ಯ ರಾಜ್ಯದಲ್ಲಿಯೂ ಪ್ರತಿಭಟನೆಯ ಕಿಚ್ಚು ಹೊತ್ತಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಹೈ ಅಲರ್ಟ್ ಆಗಿರುವಂತೆ ಪೊಲೀಸರಿಗೆ, ಹಿರಿಯ ಅಧಿಕಾರಿಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.
ಅನುಮತಿ ಇಲ್ಲದೆ ಮೆರವಣಿಗೆ, ಪ್ರತಿಭಟನೆ ಆಗಬಾರದು. ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಬೇಕು ಎಂದು ಸಭೆಯಲ್ಲಿ ಪ್ರವೀಣ್ ಸೂದ್ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
PublicNext
29/06/2022 05:07 pm