ಅನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಸೆಂಟ್ ಫ್ರಾನ್ಸಿಸ್ ಕಾಲೇಜು ಸಭಾಂಗಣದಲ್ಲಿ ಜನಸಂಪರ್ಕ ಸಭೆಯನ್ನು ಆಯೋಜನೆ ಮಾಡಲಾಗಿತ್ತು.
ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಹಾಗೂ ಬೆಂಗಳೂರು ಗ್ರಾಮಾಂತರ ಎಸ್ಪಿ ವಂಶಿಕೃಷ್ಣ ದೀಪ ಬೆಳಗುವುದರ ಮೂಲಕ ಚಾಲನೆ ನೀಡಿದರು.
ಇನ್ನು ಜನಸಂಪರ್ಕ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಅಲ್ಲೇ ಬಗೆಹರಿಸುವ ಜನಸಂಪರ್ಕ ಕಾರ್ಯಕ್ರಮ ಇದಾಗಿದ್ದು ಕೆಲವೊಂದು ಸಮಸ್ಯೆಗಳ ಬಗ್ಗೆ ಮಾಹಿತಿ ಕಲೆಹಾಕಿ ಅಲ್ಲೇ ಸಮಸ್ಯೆಗಳನ್ನು ಬಗೆಹರಿಸುವ ಕಾರ್ಯವನ್ನು ಮಾಡಿದರು.. ಇನ್ನು ಊರುಗಳಲ್ಲಿ ಗಲಾಟೆಗಳು ಆದ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆ ತಗೋಬಾರದು, ಮಹಿಳೆಯರಿಗೆ ಮತ್ತು ಮಕ್ಕಳ ರಕ್ಷಣೆಗಾಗಿ ಹಲವಾರು ಕಾನೂನುಗಳನ್ನು ಜಾರಿಗೆ ತಂದಿದ್ದು, ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಅವಶ್ಯಕತೆ ಇದೆ.
ಆದ್ದರಿಂದ ಸಮುದಾಯದ ಮಟ್ಟದಲ್ಲಿ ಜನ ಸಂಪರ್ಕ ಸಭೆಗಳನ್ನು ಆಯೋಜಿಸಲಾಗುತ್ತಿದೆ ಇದರ ಸದುಪಯೋಗ ಮಾಡಿಕೊಳ್ಳಿ ಅಂತ ತಿಳಿಸಿದರು.. ಇನ್ನು ಕಾರ್ಯಕ್ರಮದಲ್ಲಿ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಬೆಂಗಳೂರು ಗ್ರಾಮಾಂತರ ಎಸ್ಪಿ ವಂಶಿಕೃಷ್ಣ ಆನೇಕಲ್ ವಿಭಾಗದ ಡಿವೈಎಸ್ಪಿ ಮಲ್ಲೇಶ್ ಹಾಗೂ ಸಿಬ್ಬಂದಿಗಳು ಭಾಗಿಯಾಗಿದ್ದರು.
Kshetra Samachara
07/07/2022 07:15 pm