ಬೆಂಗಳೂರು : ಬೆಂಗಳೂರು ವ್ಯಾಪ್ತಿ ಯಲ್ಲಿನ ಭೂ ವಿವಾದಕ್ಕೆ ಸಂಬಂಧಿ ಸಿದಂತೆ ಲಂಚ ಪಡೆದ ಅಧಿಕಾರಿಗಳ ಜತೆ ಶಾಮೀಲಾಗಿರುವ ಆರೋಪ ಹಿನ್ನೆಲೆಯಲ್ಲಿ ಅರೆಸ್ಟ್ ಆಗಿರುವ ಮಾಜಿ ಬೆಂಗಳೂರು ಡಿಸಿ ಹಾಗೂ ಐಎಎಸ್ ಅಧಿಕಾರಿ ಜೆ.ಮಂಜುನಾಥ್ ಅವರಿಗೆ ಜಾಮೀನು ಮಂಜೂರು ಮಾಡಲು ಹೈಕೋರ್ಟ್ ನಿರಾಕರಿಸಿದೆ.
ನ್ಯಾಯಮೂರ್ತಿ ನಟರಾಜನ್ ನೇತೃತ್ವದ ಹೈಕೋರ್ಟ್ ಏಕಸದಸ್ಯ ಪೀಠವು ನಿನ್ನೆ ಆರೋಪಿತ ಅಧಿಕಾರಿ ಮಂಜುನಾಥ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ, ಜಾಮೀನು ತಿರಸ್ಕರಿಸಿ ಆದೇಶ ಹೊರಡಿಸಿದೆ. ಅರ್ಜಿದಾರರಾದ ಮಂಜುನಾಥ್ ಅವರಿಗೆ ಜಾಮೀನು ನೀಡುವುದಕ್ಕೆ ಎಸಿಬಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು.
ಮಂಜುನಾಥ್ ಅವರಿಗೆ ಜಾಮೀನು ನೀಡದಂತೆ ಆಕ್ಷೇಪಣೆ ಸಲ್ಲಿಸ ಲಾಗಿದೆ. ಆರೋಪಿತ ಅಧಿಕಾರಿ ಅವರು ಇತರ ಆರೋಪಿಗಳ ಜೊತೆ ಮೇ 18ರಂದು ಸಮಾಲೋಚನೆ ನಡೆಸಿರುವ ಆಡಿಯೋ ಕ್ಲಿಪ್ ಇದೆ. ತನಿಖೆ ಪ್ರಗತಿಯಲ್ಲಿದೆ, ಈ ಹಂತದಲ್ಲಿ ಜಾಮೀನು ನೀಡಿದರೆ ತನಿಖೆಗೆ ತೊಂದರೆಯಾಗಲಿದೆ ಎಂದು ವಾದಿಸಿದ್ದರು.
ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕೆ ಲಕ್ಷ್ಮಿನಾರಾಯಣ ಭಟ್ ಅವರು ಕಳೆದ ಜುಲೈ 11ರಂದು ಮಂಜುನಾಥ್ ಅವರ ಜಾಮೀನು ಅರ್ಜಿ ವಜಾಗೊಳಿಸಿದ್ದರು.
Kshetra Samachara
04/08/2022 12:09 pm