ಬೆಂಗಳೂರು: ನಗರದ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈದ್ಗಾ ಮೈದಾನವನ್ನು ಕಂದಾಯ ಇಲಾಖೆ ಆಸ್ತಿ ಎಂದು ಘೋಷಿಸಿದ್ದಕ್ಕೆ ಬಿಬಿಎಂಪಿ ವಿರುದ್ಧ ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿ ಕಿಡಿ ಕಾರಿದ್ದಾರೆ.
1965ರಲ್ಲಿಯೇ ಸುಪ್ರೀಂ ಕೋರ್ಟ್ ಈ ಮೈದಾನವು ವಕ್ಫ್ ಮಂಡಳಿಯದ್ದು ಎಂದು ತೀರ್ಪು ಕೊಟ್ಟಿದೆ. ಈಗ ಬಿಬಿಎಂಪಿ ಮತ್ತೊಮ್ಮೆ ಪ್ರತ್ಯೇಕ ಆದೇಶ ಹೊರಡಿಸುವ ಮೂಲಕ ನ್ಯಾಯಾಂಗ ನಿಂದನೆ ಮಾಡಿದೆ. ಬಿಬಿಎಂಪಿ ಆದೇಶ ಪ್ರಶ್ನಿಸಿ ಕಾನೂನು ಹೋರಾಟ ಮಾಡುತ್ತೇವೆ ಎಂದು ಅವರು ಘೋಷಿಸಿದ್ದಾರೆ.
ಚಾಮರಾಜಪೇಟೆ ಈದ್ಗಾ ಮೈದಾನವು ನಮಗೆ ಸೇರಿದ್ದಲ್ಲ ಎಂದು ಬಿಬಿಎಂಪಿಯೇ ಒಂದು ಕಾಲಘಟ್ಟದಲ್ಲಿ ಹೇಳಿತ್ತು. ಈಗ ನೋಡಿದರೆ ಅದೇ ಬಿಬಿಎಂಪಿ ಈ ಆಸ್ತಿಯನ್ನು ರಾಜ್ಯ ಕಂದಾಯ ಇಲಾಖೆಗೆ ಸೇರಿದ್ದು ಎಂದು ಆದೇಶ ಹೊರಡಿಸಿದೆ. ಈ ಬಗ್ಗೆ ನಾವು ಕಾನೂನು ತಜ್ಞರಲ್ಲಿ ಚರ್ಚೆ ಮಾಡಿ ಕಾನೂನಾತ್ಮಕ ಹೋರಾಟ ರೂಪಿಸುತ್ತೇವೆ ಎಂದು ಅವರು ತಿಳಿಸಿದರು.
PublicNext
07/08/2022 01:11 pm