ಬೆಂಗಳೂರು: ಇತ್ತೀಚೆಗೆ ಗಾಂಜಾ ಗ್ಯಾಂಗ್ ಬಂಧನಕ್ಕೆ ಹೋಗಿದ್ದ ಸಬ್ ಇನ್ ಸ್ಪೆಕ್ಟರ್ ಮತ್ತು ಕಾನ್‌ಸ್ಟೇಬಲ್ ಸೇರಿ ಮೂವರು ಮೃತಪಟ್ಟ ದುರ್ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ, ರಾತ್ರಿ ವೇಳೆಯಲ್ಲಿ ಅನಗತ್ಯವಾಗಿ ಪ್ರಯಾಣ ಬೆಳೆಸದಂತೆ ನಿರ್ಬಂಧಿಸಿ ಆದೇಶ ಹೊರಡಿಸಿದೆ.ಸಿಐಡಿ ಅಧಿಕಾರಿ ಸಿಬ್ಬಂದಿಗೆ ಮಾತ್ರ ಅನ್ವಯ ಆಗುವಂತೆ ಸಿಐಡಿ ಪೊಲೀಸ್ ಮಹಾನಿರ್ದೇಶಕ ಪಿ.ಎಸ್ ಸಂಧು ಈ ಆದೇಶ ಹೊರಡಿಸಿದ್ದಾರೆ. ಸಹೋದ್ಯೋಗಿಗಳ ಸುರಕ್ಷತೆ ಹಿತದೃಷ್ಟಿಯಿಂದ ಆದೇಶಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಸಿಐಡಿಯಲ್ಲಿರುವ ಪೊಲೀಸ್ ಅಧಿಕಾರಿ ಸಿಬ್ಬಂದಿ ಕಾನೂನು ಸುವ್ಯವಸ್ಥೆ ಬಂದೋಬಸ್ತ್ ಚುನಾವಣಾ ಕರ್ತವ್ಯ, ಅಪರಾಧ ಪ್ರಕರಣಗಳ ತನಿಖಾ ಸಂಬಂಧ ಹಾಗೂ ಇತರೆ ಅನ್ಯ ಕಾರ್ಯದ ಮೇಲೆ ನಿಯೋಜನೆಗೊಳ್ಳುವವರು ಯಾವುದೇ ವಾಹನದಲ್ಲಿ ಕರ್ತವ್ಯದ ನಿಮಿತ್ತ ಅಥವಾ ಕರ್ತವ್ಯದಿಂದ ಬಿಡುಗಡೆಯಾದ ನಂತರ ಸುರಕ್ಷತೆಯ ದೃಷ್ಟಿಯಿಂದ ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯವರೆಗೆ ಪ್ರಯಾಣ ಮಾಡದಂತೆ ಆದೇಶದಲ್ಲಿ ತಿಳಿಸಲಾಗಿದೆ.
Kshetra Samachara
09/09/2022 10:33 am