ಬೆಂಗಳೂರು: ಬೆಂಗಳೂರಿನ ಪ್ರೆಸಿಡೆನ್ಸಿ ಕಾಲೇಜು ಆವರಣದಲ್ಲಿ ಹಾವು ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳು ಗಾಬರಿಗೊಂಡಿದ್ದರು. ಈ ವೇಳೆ ಕಾಲೇಜಿನ ಸೆಕ್ಯೂರಿಟಿ ಗಾರ್ಡ್ ಅವೈಜ್ಞಾನಿಕವಾಗಿ ಹಾವನ್ನು ಹಿಡಿಯಲು ಮುಂದಾಗಿದ್ದರು. ಇದನ್ನು ನೋಡಿದ ಕಾಲೇಜಿನ ವಿದ್ಯಾರ್ಥಿ ಅಕ್ಷಿತ್ ಸೆಕ್ಯೂರಿಟಿ ಗಾರ್ಡ್‌ನನ್ನು ತಡೆದು ಹಾವನ್ನು ರಕ್ಷಿಸಿದ್ದಾರೆ. ಬಳಿಕ ಬ್ಯಾಗ್‌ನಲ್ಲಿ ಹಾಕಿಕೊಂಡು ಸುರಕ್ಷಿತ ಸ್ಥಳದಲ್ಲಿ ಬಿಟ್ಟು ಬಂದಿದ್ದಾರೆ.
ಈ ಘಟನೆ ಮೊನ್ನೆ ಮಧ್ಯಾಹ್ನ ನಡೆದಿದ್ದು, ಸದ್ಯ ವಿಡಿಯೋ ಸಾಮಾಜಿಕ ತಾಣದಲ್ಲಿ ಫುಲ್ ವೈರಲ್ ಆಗಿದೆ. ಕಾಲೇಜು ಆವರಣದಲ್ಲಿ ಕಂಡುಬಂದ ಹಾವನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ ಅಕ್ಷಿತ್ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.
PublicNext
27/06/2022 07:57 pm