ಬೆಂಗಳೂರು: ಬೆಂಗಳೂರಿನಲ್ಲಿ ಮಳೆ ಅಬ್ಬರ ತಗ್ಗುತ್ತಿಲ್ಲ. ಇಂದು ಸುರಿದ ಮಳೆಗೆ ಚಲಿಸುತ್ತಿದ್ದ ಬಿಎಂಟಿಸಿ ಬಸ್ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದು ಬಸ್ ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಹೊಸಕೆರೆಹಳ್ಳಿಯ ಪಿಇಎಸ್ ಕಾಲೇಜ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು ಮರ ಉದ್ದ ಇದ್ದ ಕಾರಣ ವಿದ್ಯುತ್ ಕಂಬಕ್ಕೆ ಹೊಡೆದು ನಂತರ ಬಸ್ ಮೇಲೆ ಬಿದ್ದಿದೆ. ಸ್ಥಳಕ್ಕೆ ಬಿಬಿಎಂಪಿ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಮರ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಹೊಸಕೆರೆಹಳ್ಳಿಯಿಂದ ನಾಯಂಡಹಳ್ಳಿ ಕಡೆಗೆ ಬಸ್ ಹೋಗುತ್ತಿತ್ತು. ಮಳೆ ಕಡಿಮೆ ಸುರಿದಿದ್ದು, ಗಾಳಿ ಜೋರಾಗಿ ಬೀಸಿದ ಕಾರಣ ಮರ ನೆಲಕ್ಕೆ ಬಿದ್ದಿದೆ.
Kshetra Samachara
06/05/2022 10:49 pm