ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇನ್ನೆರೆಡು ದಿನ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ನಗರದಲ್ಲಿ ಧಾರಾಕಾರ ಮಳೆ ಆಗುವ ಮುನ್ಸೂಚನೆ ಬೆಂಗಳೂರು ಹಾಗೂ ಭಾರತೀಯ ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ನಾಳೆ ಮತ್ತು ನಾಡಿದ್ದು ಶಾಲಾ - ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಈ ಬಗ್ಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ ಆದೇಶಿಸಿದ್ದಾರೆ. ಬೆಂಗಳೂರು ನಗರದಲ್ಲಿ ಮಳೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಸಲುವಾಗಿ ನ. 19, 20 ರಂದು ರಜೆ ನೀಡಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ಪ್ರಬಲ ವಾಯು ಭಾರ ಕುಸಿತದಿಂದಾಗಿ ರಾಜಧಾನಿಯಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಾಗಿ ನಾಳೆ ಬೆಂಗಳೂರಿಗೆ ಯಲ್ಲೊ ಅಲರ್ಟ್ ಘೋಷಿಸಲಾಗಿದೆ. ಈ ಬಗ್ಗೆ ಹವಾಮಾನ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿದ್ದರು.
Kshetra Samachara
18/11/2021 10:23 pm