ಬೆಂಗಳೂರು: ಮಳೆ ನಿಂತರೂ ಮಳೆಯ ಹನಿ ನಿಂತಿಲ್ಲ... ಎಂಬಂತಹ ಪರಿಸ್ಥಿತಿ ಯಲಹಂಕ ಕೇಂದ್ರೀಯ ವಿಹಾರ ಅಪಾರ್ಟ್ ಮೆಂಟ್ ನಲ್ಲಿ ಕಂಡು ಬರುತ್ತಿದೆ.ಇನ್ನು, ಮಳೆಯ ನೀರನ್ನು ಹೊರ ತೆಗೆಯಲು ಅಲ್ಲಿನ ನಿವಾಸಿಗಳು, ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಈ ಸಂಬಂಧ ಇಂದು ಬೆಳಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಭೇಟಿ ನೀಡಿ, ಸ್ಥಳ ಪರಿಶೀಲನೆ ಮಾಡಿದರು. ಕೆರೆ ಕೋಡಿ ಒಡೆದುದರ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ವೇಳೆ ಸ್ಥಳೀಯ ಶಾಸಕ ಎಸ್.ಆರ್.ವಿಶ್ವನಾಥ್, ಮುಖ್ಯ ಆಯುಕ್ತ ಗೌರವ್ ಗುಪ್ತ, ವಲಯ ಆಯುಕ್ತ ದಯಾನಂದ್, ಜಂಟಿ ಆಯುಕ್ತರಾದ ಪೂರ್ಣಿಮಾ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
23/11/2021 12:16 pm