ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಫಲಪುಷ್ಪ ಪ್ರದರ್ಶನದಲ್ಲಿ ಡಾ. ರಾಜ್ ಕುಮಾರ್ ಮತ್ತು ಡಾ.ಪುನೀತ್ ರಾಜ್ ಕುಮಾರ್

ವರದಿ: ಗೀತಾಂಜಲಿ

ಬೆಂಗಳೂರು : ಬೆಂಗಳೂರಿನ ಆಕರ್ಷಣೀಯ ಸ್ಥಳಗಳಲ್ಲಿ ಲಾಲ್ ಬಾಗ್ ಕೂಡ ಒಂದು. ಇಲ್ಲಿ ನಡೆಯುವ ಫಲ ಪುಷ್ಪ ಪ್ರದರ್ಶನ ಪ್ರತಿ ವರ್ಷ ಎಲ್ಲರ ಗಮನ ಸೆಳೆಯುತ್ತದೆ.

ಕೋವಿಡ್ ಕಾರಣದಿಂದಾಗಿ ಕಳೆದೆರಡು ವರ್ಷಗಳಿಂದ ಕಳೆಗುಂದಿದ್ದ ಲಾಲ್ ಬಾಗ್ ನ ಫಲಪುಷ್ಪ ಪ್ರದರ್ಶನಕ್ಕೆ ಈ ಬಾರಿ ಮತ್ತೆ ಕಳೆಬಂದಿದೆ. ತೋಟಗಾರಿಕೆ ಇಲಾಖೆ ಫಲಪುಷ್ಪ ಪ್ರದರ್ಶನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಈ ಬಾರಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಲಾಲ್ ಬಾಗ್ ನಲ್ಲಿ ಪ್ರತಿ ವರ್ಷದಂತೆ ಫಲಪುಷ್ಪ ಪ್ರದರ್ಶನ ನಡೆಸಲು ತೋಟಗಾರಿಕೆ ಇಲಾಖೆ ನಿರ್ಧರಿಸಿದೆ. ಆಗಸ್ಟ್ 5 ರಿಂದ 15 ರವರೆಗೆ ಪಲಪುಷ್ಪ ಪ್ರದರ್ಶನ ನಡೆಯಲಿದ್ದು, ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ಕರ್ನಾಟಕ ರತ್ನ ಡಾ ರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ರಾರಾಜಿಸಲಿದ್ದಾರೆ.

ಹೂವುಗಳ ಅಲಂಕಾರದಲ್ಲಿ ರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಅವರ ಪ್ರತಿಮೆಗಳನ್ನು ಮಾಡಿ ಪ್ರದರ್ಶನಕ್ಕೆ ಇಡುತ್ತಿರುವುದು ಈ ಬಾರಿಯ ವಿಶೇಷವಾಗಿದೆ.

ಇನ್ನು ಈ ಬಾರಿ ನಡೆಯುವ ಫಲಪುಷ್ಪ ಪ್ರದರ್ಶನಕ್ಕೆ ಹೆಚ್ಚಿಗೆ ಜನ ಬರುವ ನಿರೀಕ್ಷೆಯಲ್ಲಿದೆ ತೋಟಗಾರಿಕೆ ಇಲಾಖೆ.

Edited By :
PublicNext

PublicNext

14/07/2022 09:59 pm

Cinque Terre

47.24 K

Cinque Terre

0

ಸಂಬಂಧಿತ ಸುದ್ದಿ