ಬೆಂಗಳೂರು : ನಗರದಲ್ಲಿಂದು ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ ಈಗಾಗಲೇ ಮುನ್ಸೂಚನೆ ನೀಡಲಾಗಿದೆ.ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ವಾಹನ ಸವಾರರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶ ರವಾನೆ ಮಾಡಿದೆ.
ಇನ್ನೂ ಬಿಬಿಎಂಪಿಗೆ ತಗ್ಗು ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಪಾಲಿಕೆ ಕೂಡ ತಗ್ಗು ಪ್ರದೇಶಗಳಲ್ಲಿ ಹೆಚ್ಚಿನ ಸಿಬ್ಬಂದಿ ನೇಮಕ ಮಾಡಿದ್ದಾರೆ. ಹಿರಿಯ ಅಧಿಕಾರಿಗಳಿಗೆ ರಜೆ ರದ್ದು ಮಾಡಿ ಡ್ಯೂಟಿಗೆ ಹಾಜರಾಗಲು ಮೌಖಿಕ ಸೂಚನೆ ನೀಡಲಾಗಿದೆ. ತಗ್ಗು ಪ್ರದೇಶಗಳಲ್ಲಿ ಮಳೆಯಿಂದ ಹಾನಿ ಆಗುವ ಸಾಧ್ಯತೆ ಇದೆ. ಹೀಗಾಗಿ ಬಿಬಿಎಂಪಿಯಿಂದ ಹೆಚ್ಚಿನ ಸಿಬ್ಬಂದಿ ನೇಮಕ ಮಾಡಲಾಗಿದೆ.
ಇನ್ನು, ರಸ್ತೆಗಳಲ್ಲಿ ಮರ ಬಿದ್ದ ತಕ್ಷಣ ಮರ ತೆರವಿಗೆ ಹಾಗೂ ಅಪಾರ್ಟ್ಮೆಂಟ್ ಗಳಲ್ಲಿ ನೀರು ಹೊರ ಹಾಕುವುದಕ್ಕೆ ಮೋಟರ್ ಬಳಕೆಗೆ ಬಿಬಿಎಂಪಿಯಿಂದ ಸೂಚನೆ ನೀಡಲಾಗಿದೆ.ಮುಖ್ಯವಾಗಿ ಸಾಯಿ ಲೇಔಟ್, ಬೊಮ್ಮನಹಳ್ಳಿ, ಅರ್ ಅರ್ ನಗರದಲ್ಲಿ ಮುನ್ನೆಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಜರುಗಿಸಲು ಆಯುಕ್ತರಿಂದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Kshetra Samachara
30/08/2022 11:07 am