ಬೆಂಗಳೂರು: ಕಳೆದೊಂದು ವಾರದಿಂದ ಕೊಂಚ ಶಾಂತವಾಗಿದ್ದ ಮಲೆನಾಡು ಮತ್ತು ಕರಾವಳಿಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದೆ. 2 ದಿನಗಳಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಆರೆಂಜ್ ಅಲರ್ಟ್ ಮುಂದುವರೆದಿದೆ. ಇಂದು ಕೂಡ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಯಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದೆ. ಮಲೆನಾಡು, ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
PublicNext
01/08/2022 09:33 pm