ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕೆಂಗೇರಿ ಸುತ್ತ-ಮುತ್ತ ಭಾರಿ ಮಳೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ 3 ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಇಂದು (ಸೋಮವಾರ) ಸಹ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ.

ಕೆಂಗೇರಿ, ಉಪನಗರ, ಗಾಂಧಿನಗರ, ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಇಂದು ಸಂಜೆ ಗುಡುಗು ಸಮೇತವಾಗಿ ಭಾರಿ ಮಳೆಯಾಗುತ್ತಿದೆ. ಪರಿಣಾಮ ದಿನದ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಾಯಿತು.

ವಾತಾವರಣದಲ್ಲಿ ತಾಪಮಾನ ಏರಿಕೆಯಾಗುವುದರಿಂದ ಸ್ಥಳೀಯವಾಗಿ ವಾಯುಭಾರ ಕುಸಿತ ಉಂಟಾಗಿ ಗುಡುಗು ಸಹಿ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Edited By :
PublicNext

PublicNext

18/04/2022 05:40 pm

Cinque Terre

41.52 K

Cinque Terre

0

ಸಂಬಂಧಿತ ಸುದ್ದಿ