ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ರಾಜ್ಯದಲ್ಲಿ ಮತ್ತೆರಡು ದಿನ ಮಳೆ ಸಾಧ್ಯತೆ: ಯಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ನ. 17ರ ವರೆಗೂ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಹಾಗಾಗಿ, ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ನಗರದಲ್ಲಿ ಇಂದು ಬೆಳಗ್ಗೆ ಗರಿಷ್ಠ ಉಷ್ಣಾಂಶ 25.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, 1 ಮಿ.ಮೀ. ಮಳೆಯಾಗಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 36 ಮಿ.ಮೀ., ಹೆಚ್‌ಎಎಲ್ ವಿಮಾನ ನಿಲ್ದಾಣದಲ್ಲಿ 2. 4 ಮಿ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದರು.

ನಿನ್ನೆ ತಮಿಳುನಾಡು ಪ್ರದೇಶದಲ್ಲಿ ವಾಯುಭಾರ ಕುಸಿತ ಮತ್ತಷ್ಟು ದುರ್ಬಲಗೊಂಡು, ಮೇಲ್ಮೈ ಸುಳಿಗಾಳಿ ರೂಪದಲ್ಲಿ ಇರುವುದರಿಂದ ಇಂದು ಮತ್ತು ನಾಳೆ ಗರಿಷ್ಠ ಉಷ್ಣಾಂಶದಲ್ಲಿ ಸ್ವಲ್ಪ ಏರಿಕೆಯಾಗಲಿದೆ.

ಆದರೆ, ಬೆಂಗಳೂರಿನಲ್ಲಿ ಎರಡೂ ದಿನವೂ ಮೋಡ ಕವಿದ ವಾತಾವರಣ ಇರಲಿದೆ. ಒಂದೆರಡು ಬಾರಿ ಮಾತ್ರ ಮಳೆಯಾಗಲಿದ್ದು, ನಾಳೆ ಕೆಲವು ಬಾರಿ ಮಳೆಯಾಗುವ ಸಾಧ್ಯತೆ ಇದೆ.

Edited By : Nagesh Gaonkar
Kshetra Samachara

Kshetra Samachara

15/11/2021 03:57 pm

Cinque Terre

560

Cinque Terre

0

ಸಂಬಂಧಿತ ಸುದ್ದಿ