ಬೆಂಗಳೂರು: ಅಸಾನಿ ಚಂಡಮಾರುತ ಪರಿಣಾಮ ಹಿನ್ನೆಲೆ ರಾಜ್ಯದ ಹಲವೆಡೆ ಇನ್ನೂ 5 ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಆಗ್ನೇಯ ಬಂಗಾಳಕೊಲ್ಲಿ ಹಾಗೂ ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ತೀವ್ರ ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯಾದ್ಯಂತ ಗುಡುಗು, ಸಿಡಿಲಿನೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್ 24ರವರೆಗೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲಿ ನಿನ್ನೆ ಮಳೆಯಾಗಿದೆ. ಬಂಗಾಳ ಕೊಲ್ಲಿಯ ವಾಯುಭಾರ ಕುಸಿತ ಮತ್ತು ಅಸಾನಿ ಚಂಡಮಾರುತದ ಪರಿಣಾಮವಾಗಿ ಸಂಜೆಯ ವೇಳೆಯಲ್ಲಿ ರಾಜಧಾನಿಯ ಮಲ್ಲೇಶ್ವರಂ ಸದಾಶಿವನಗರ, ಚಾಮರಾಜಪೇಟ, ಚಿಕ್ಕಪೇಟೆಯಲ್ಲಿ ಮಳೆಯಾಗಿದೆ. ಗಿರಿನಗರ, ಹನುಮಂತನಗರ, ಬನಶಂಕರಿ, ಬಸವನಗುಡಿ, ಜಯನಗರ, ಜೆಪಿ ನಗರ, ಕುರುಬರಹಳ್ಳಿ, ಪದ್ಮನಾಭನಗರ, ಗಾಂಧಿನಗರ, ಕಾಟನ್ ಪೇಟೆ ಹಾಗೂ ಕಬ್ಬನ್ ಪಾರ್ಕ್, ಕೆಆರ್ ಮಾರುಕಟ್ಟೆ ಸುತ್ತಮುತ್ತಲಿನ ಪ್ರದೇಶಗಳು ಸೇರಿದಂತೆ ನಗರದ ಹೊರ ಭಾಗದಲ್ಲಿ ಮಳೆಯಾಗಿದೆ.
PublicNext
21/03/2022 06:31 pm