ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ನಗರದಲ್ಲಿ ಮಳೆರಾಯನ ಆರ್ಭಟ; ವಾಹನ ಸವಾರರ ಪರದಾಟ

ಬೆಂಗಳೂರು: ನಗರದಲ್ಲಿ ಎಲ್ಲೆಡೆ ಭಾರಿ‌ ಮಳೆಯಾಗುತಿದ್ದು, ಕೆಲಸ ಮುಗಿಸಿ ಮನೆಗೆ ತೆರಳುವವರಿಗೆ ಮಳೆ ಕಾಟ ಕೊಟ್ಟಿದೆ. ವಸಂತನಗರ, ಮೆಜೆಸ್ಟಿಕ್, ಆರ್.ಟಿ. ನಗರ ಹಾಗೂ ನಗರದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ.

ಗಾಳಿ- ಮಳೆಯಿಂದಾಗಿ ವಾಹನ ಸವಾರರು ಪರದಾಡುತ್ತಿದ್ದಾರೆ. ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣ‌ ಇತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ.ಶಾಂತಿನಗರ, ಕಾರ್ಪೊರೇಷನ್, ಮೈಸೂರು ರಸ್ತೆ, ಮೆಜೆಸ್ಟಿಕ್, ವಿಧಾನಸೌಧ, ಶಿವಾಜಿನಗರ ಕೆಂಗೇರಿ, ರಾಜರಾಜೇಶ್ವರಿ ನಗರ ಸಹಿತ ನಾನಾ ಕಡೆ ಬಿರುಸಿನ ಮಳೆಯಾಗುತ್ತಿದೆ.

Edited By : Manjunath H D
Kshetra Samachara

Kshetra Samachara

03/05/2022 10:34 pm

Cinque Terre

2.79 K

Cinque Terre

0

ಸಂಬಂಧಿತ ಸುದ್ದಿ