ಬೆಂಗಳೂರು: ಕರ್ನಾಟಕದಲ್ಲಿ ಮಳೆ ಹೆಚ್ಚಾಗಿದ್ದು, ಜುಲೈ 1ರವರೆಗೂ ವರುಣನ ಆರ್ಭಟ ಮುಂದುವರೆದಿದೆ. ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗಲಿದೆ.
ಭಾರತೀಯ ಹವಾಮಾನ ಇಲಾಖೆಯು ಬೆಂಗಳೂರಿನಲ್ಲಿ ಇಂದು ಸಂಜೆ ಮಳೆಯಾಗಿದೆ ಎಂದು ತಿಳಿಸಿತ್ತು. ಅದರಂತೆ ಸಂಜೆ ವೇಳೆಯಲ್ಲಿ ಮಳೆಯಾಗಿದೆ. ಇನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ, ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡಿನಲ್ಲೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
Kshetra Samachara
29/06/2022 07:39 pm