ಬೆಂಗಳೂರು: ರಾಜ್ಯದಲ್ಲಿ ಮಳೆಯ ಪ್ರಮಾಣ ಕೊಂಚ ಇಳಿಕೆಯಾಗಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಬದಲಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ರಾಜ್ಯದಲ್ಲಿ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಆರೆಂಜ್ ಅಲರ್ಟ್‌ನಲ್ಲಿ 115 ಮಿ.ಮೀ ನಿಂದ 204 ಮಿ.ಮೀ ವರೆಗೆ ಭಾರೀ ಮಳೆ ಸಾಧ್ಯತೆ ಇದೆ.
ಮುಂದಿನ ಮೂರು ದಿನಗಳಿಗೆ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಇನ್ನು ಗುರುವಾರದಿಂದ ಕರಾವಳಿಗೆ ಮಳೆಯ ಪ್ರಮಾಣದಲ್ಲಿ ಇಳಿಕೆಯಾಗಲಿದೆ. ಪಶ್ಚಿಮ ಘಟ್ಟದ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಿಗೆ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಮತ್ತೆ ಮೂರು ದಿನಗಳ ಕಾಲ ಹಾಸನ ಸೇರಿದಂತೆ ಪ.ಘ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಿಗೆ ಮುಂದಿನ ಐದು ದಿನವೂ ಎಲ್ಲೋ ಅಲರ್ಟ್ ಮುಂದುವರೆಯಲಿದೆ. ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳೊಗೆ ಇಂದು ಮಾತ್ರ ಮಳೆ ಸಾಧ್ಯತೆ ಇದೆ. ಹಾವೇರಿ ಹೊರತುಪಡಿಸಿ ಉ.ಒಳನಾಡು ಜಿಲ್ಲೆಗಳಿಗೆ ನಾಳೆಯಿಂದ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Kshetra Samachara
13/07/2022 11:27 am