ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಮುಂದುವರೆದಿದ್ದು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಮಲೆನಾಡು ಭಾಗದಲ್ಲೂ ಮಳೆ ಮುಂದುವರೆದಿದೆ. ಸದ್ಯಕ್ಕೆ ಮಳೆ ಬಿಡುವ ಕೊಡುವ ಸೂಚನೆಗಳು ಕಂಡುಬರುತ್ತಿಲ್ಲ. ಆದರೆ ಮುಂದಿನ ಕೆಲ ದಿನಗಳಲ್ಲಿ ಮಳೆಯ ಆರ್ಭಟ ಇಳಿಕೆಯಾಗುವ ಸಾಧ್ಯತೆಗಳು ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರ ಭಾಗದಲ್ಲಿ ಟ್ರಪ್ ನಿರ್ಮಾಣವಾಗಿರುವುದರಿಂದ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ನಿಲ್ಲುವ ಸೂಚನೆಗಳಿಲ್ಲ. ಇನ್ನು ಕೆಲ ದಿನ ಹೆಚ್ಚು ಕಡಿಮೆ ಇದೇ ರೀತಿ ಮಳೆ ಮುಂದುವರೆಯಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸದ್ಯ ದಕ್ಷಿಣ ಒಳನಾಡು ಸೇರಿದಂತೆ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಆಗಾಗ್ಗೆ ಬಲವಾದ ಮೇಲೆ ಗಾಳಿ ಬೀಸಲಿದೆ. ಕೆಲವಡೆ ಹಗುರದಿಂದ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ ಎಂದು ತಿಳಿಸಿದ್ದಾರೆ.
ಪ್ರವಾಹ ಪರಿಸ್ಥಿತಿ ಮುಂದುವರಿಕೆ:
ಮಳೆ ಪ್ರಮಾಣ ಇಳಿಕೆಯಾದರೂ ಕಳೆದ ಮೂರು ವಾರಗಳಿಂದ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ತೇವಾಂಶ ಹೆಚ್ಚಿದೆ ನದಿ ಮತ್ತು ಸಮುದ್ರದ ತಟಗಳಲ್ಲಿ ಪ್ರವಾಹ ಪರಿಸ್ಥಿತಿ ಇನ್ನು ಮೂರಾಲ್ಕು ದಿನ ಮುಂದುವರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
Kshetra Samachara
18/07/2022 09:42 pm