ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ರಾತ್ರಿ ಸುರಿದ ಮಳೆಗೆ ರಾಜಧಾನಿಯ ಜನಜೀವನ ಅಸ್ತವ್ಯಸ್ತ

ಬೆಂಗಳೂರು: ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಸಂಜೆಯಾಗುತ್ತಿದ್ದಂತೆ ಧೋ ಎಂದು ಶುರುವಾಗುವ ಮಳೆರಾಯ ಬೆಳಗಿನ ಜಾವದವರೆಗೂ ಸುರಿಯುತ್ತಿದ್ದಾನೆ. ಇದರಿಂದ ಸಿಲಿಕಾನ್ ಸಿಟಿ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ದಕ್ಷಿಣ ಬೆಂಗಳೂರಿನ ರಸ್ತೆಗಳು ನದಿಯಂತಾಗಿವೆ.

ಏರಿಯಾಗಳಾದ ಈಜಿಪುರ, ಕೋರಮಂಗಲ, ಎಚ್ಎಸ್ಆರ್ ಲೇಔಟ್, ಮಡಿವಾಳ, ಬೊಮ್ಮನಹಳ್ಳಿ, ಬಿಟಿಎಂ ಲೇಔಟ್, ಜೆಪಿ ನಗರದಲ್ಲಿ ಭರ್ಜರಿ ಮಳೆಯಾಗಿದೆ.

ಅದರಲ್ಲೂ ಬನ್ನೇರುಘಟ್ಟ ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನಗಳು ಮಳೆಯ ನೀರಿನಲ್ಲಿ ತೇಲುತ್ತಿದ್ದವು. ಬಿಳೇಕಹಳ್ಳಿ ಹಾಗೂ ವಿವಿಧ ಕಡೆ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣಗೊಂಡಿದೆ.

-ನವೀನ್ ಪಬ್ಲಿಕ್ ನೆಕ್ಸ್ಟ್ ಬೆಂಗಳೂರು.

Edited By : Shivu K
Kshetra Samachara

Kshetra Samachara

02/08/2022 05:09 pm

Cinque Terre

4.8 K

Cinque Terre

0