ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ..!

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು ಆಗಸ್ಟ್ 22ರವರೆಗೂ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲಗೊಂಡಿದ್ದು, ಉತ್ತರ ಒಳನಾಡಿನ ಕೆಲವು ಕಡೆ ಮತ್ತು ದಕ್ಷಿಣ ಒಳನಾಡಿನ ಒಂದೆರೆಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕನ್ನಡ, ಯಾದಗಿರಿ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಮಂಡ್ಯ, ದಾವಣಗೆರೆ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಇದರ ಹೊರತಾಗಿ ರಾಜ್ಯದ ಹವಾಮಾನದಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿಡ ವಾತಾವರಣವಿದ್ದು, ಗುಡುಗು ಸಹಿತ ಮಳೆಯಾಗಲಿದೆ. ನಗರದ ಕೆಲವು ಕಡೆಗಳಲ್ಲಿ ಒಂದೆರೆಡು ಬಾರಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದರ ಹೊರತಾಗಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಅದೇ ರೀತಿ ಮುಂದಿನ 48 ಗಂಟೆಗಳಲ್ಲಿ ಸಿಲಿಕಾನ್ ಸಿಟಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಇದೇ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಲಿದೆ.

ಕರ್ನಾಟಕದ ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಇದರ ಹೊರತಾಗಿ ಉತ್ತರ ಒಳನಾಡಿನ ಒಂದೆರೆಡು ಕಡೆಯಲ್ಲಿ ಮಳೆ ಆಗಲಿದೆ. ಮುಂದಿನ 24 ಗಂಟೆಗಳಲ್ಲಿ ವಾತಾವರಣದ ಹೊರನೋಟವನ್ನು ನೋಡುವುದಾದರೆ ಯಾವುದೇ ಗಮನಾರ್ಹ ಬದಲಾವಣೆಯು ಇಲ್ಲ ಎಂದು ತಿಳಿದು ಬಂದಿದೆ.

Edited By : PublicNext Desk
PublicNext

PublicNext

20/08/2022 08:30 pm

Cinque Terre

19.06 K

Cinque Terre

0

ಸಂಬಂಧಿತ ಸುದ್ದಿ