ಬೆಂಗಳೂರು: ವಾಯುಭಾರ ಕುಸಿತದ ಪರಿಣಾಮ ಭಾರೀ ಮಳೆ ಮುನ್ಸೂಚನೆ ನೀಡಿದ್ದು, ಕರ್ನಾಟಕ ಸೇರಿ 4 ರಾಜ್ಯಗಳಿಗೆ ಅಲರ್ಟ್ ಮಾಡಲಾಗಿದೆ.
ಪಶ್ಚಿಮ ಘಟ್ಟ ಭಾಗದಲ್ಲಿ ಮೂರು ದಿನ ಮಳೆ ಅಬ್ಬರವಾಗಲಿದ್ದು, ಈಗಾಗಲೇ ಮಹಾರಾಷ್ಟ್ರದ ಕರಾವಳಿ, ಪಶ್ಚಿಮ ಘಟ್ಟದಲ್ಲಿ ಮಳೆಯಾಗುತ್ತಿದೆ. ಕೇರಳ, ಕರ್ನಾಟಕ ಮತ್ತು ಆಂಧ್ರ ಪ್ರದೇಶಕ್ಕೆ ಡೇಂಜರ್ ಆಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಇಂದಿನಿಂದ ಮೂರು ದಿನ ಭಾರೀ ಮಳೆ ಆಗುವ ಸಾಧ್ಯತೆಗಳಿವೆ.
ಮಹಾರಾಷ್ಟ್ರದಿಂದ ಬೆಳಗಾವಿ ಭಾಗಕ್ಕೆ ಪ್ರವಾಹ ನುಗ್ಗುವ ಆತಂಕದಲ್ಲಿದೆ. ಈಗಾಗಲೇ ಬೆಳಗಾವಿ ಜಿಲ್ಲಾಡಳಿತ ಪ್ರವಾಹದ ಅಲರ್ಟ್ ಮಾಡಿದೆ. ಕೃಷ್ಣ ನದಿ ತೀರದ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ.
Kshetra Samachara
12/09/2022 12:28 pm