ಬೆಂಗಳೂರು: ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆ ಸಾಧ್ಯತೆಯಿದೆ.
ನಗರದಲ್ಲಿ ಮಳೆರಾಯನ ಆರ್ಭಟ ಶುರುವಾಗಿದ್ದು, ಕಾರ್ಪೋರೇಷನ್, ಮೈಸೂರ್ ಬ್ಯಾಂಕ್ ಸರ್ಕಲ್, ಮಾರ್ಕೆಟ್, ಟೌನ್ ಹಾಲ್, ವಿಲ್ಸನ್ಗಾರ್ಡನ್, ಕೋರಮಂಗಲ, ಕೆ.ಆರ್.ಮಾರ್ಕೆಟ್, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಧಾರಕಾರ ಮಳೆಯಾಗಿದೆ. ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತ್ತಾಗಿದೆ.
ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆ ಸಾಧ್ಯತೆಯಿದೆ. ಜೊತೆಗೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ರಾಜ್ಯ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ.
Kshetra Samachara
26/09/2022 03:08 pm